KPSC : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಅವಧಿ ಹೆಚ್ಚಳ

Share the Article

ಕರ್ನಾಟಕ ಲೋಕಸೇವಾ ಆಯೋಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಯಾಗುವ ಕಡ್ಡಾಯ ಕನ್ನಡ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಹೌದು!! ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಗೆ ಹೆಚ್ಚುವರಿ ಸಮಯ ತೀರ್ಮಾನ ಕೈಗೊಳ್ಳಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಕಡ್ಡಾಯ ಪರೀಕ್ಷೆ ಅಭ್ಯರ್ಥಿಗಳಿಗೆ ಅರ್ಧಗಂಟೆ ಹೆಚ್ಚುವರಿ ಸಮಯ ನೀಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಜನವರಿ 21 ರಂದು ನಡೆಯುವ ಪೌರಾಡಳಿತ ನಿರ್ದೇಶನಾಲಯದ ನೇಮಕ ಪರೀಕ್ಷೆಗೆ ಈ ವಿಸ್ತರಣೆ ಅನ್ವಯವಾಗಲಿದೆ ಎಂದು ಈ ಕುರಿತಾಗಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.

Leave A Reply