Sports authority of india recruitment | ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರೀಡಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನ ; ಅರ್ಜಿ ಸಲ್ಲಿಸಲು ಕೊನೆ ದಿನ-ಜ.28
ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಹೊಸ ದೆಹಲಿಯ ಭಾರತೀಯ ಕ್ರೀಡಾ ಪ್ರಾಧಿಕಾರವು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯುಜಿ/ಸ್ನಾತಕೋತ್ತರ ಪದವಿ ಅಥವಾ ಸಿಎ/ಐಸಿಎಸ್ಎ ಅಥವಾ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಅಕೌಂಟಿಂಗ್/ಫೈನಾನ್ಸ್/ಕಾಮರ್ಸ್ ವಿಶೇಷತೆಯಲ್ಲಿ ತತ್ಸಮಾನ ಕೋರ್ಸ್ ಮುಗಿಸಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು. ಅಲ್ಲದೇ ಅಭ್ಯರ್ಥಿಗಳ ವಯಸ್ಸು 32 ವರ್ಷ ಮೀರಿರಬಾರದು.
11 ಯುವ ವೃತ್ತಿಪರ (ಖಾತೆಗಳು/ಹಣಕಾಸು) ಹುದ್ದೆಗಳನ್ನ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೋಡ್ ಮೂಲಕ ಜನವರಿ 28, 2023ರಂದು ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅಪ್ಲಿಕೇಶನ್ಗಳು ಸೆಪ್ಟೆಂಬರ್ 12, 2022 ರಿಂದ ಪ್ರಾರಂಭವಾಗುತ್ತದೆ. ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಅಂತಿಮ ಆಯ್ಕೆಯನ್ನ ಮಾಡಲಾಗುತ್ತದೆ. ಅರ್ಹರಿಗೆ ಮಾಸಿಕ 50,000 ರೂ.ವರೆಗೆ ವೇತನ ನೀಡಲಾಗುತ್ತೆ.
ಅಧಿಕೃತ ವೆಬ್ ಸೈಟ್ : https://sportsauthorityofindia.nic.in/sai/