ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸುವ ಬಗ್ಗೆ ಪರಿಶೀಲನೆ !

ಐತಿಹಾಸಿಕ ಹಿನ್ನೆಲೆ ಒಳಗೊಂಡ ರಾಮಾಯಣದ ಕಾಲದಲ್ಲಿ ಲಂಕೆಗೆ ಹೋಗಲು ಶ್ರೀರಾಮ ನಿರ್ಮಾಣ ಮಾಡಿದ ಎಂಬ ನಂಬಿಕೆ ಇರುವ ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸುವ ಕುರಿತು ಪರಿಶೀಲನೆ ನಡೆಸುವ ಕುರಿತು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.ಶ್ರೀಲಂಕಾದ ಮನ್ನಾರ್‌ ದ್ವೀಪ ಹಾಗೂ ತಮಿಳುನಾಡಿನ ಪಂಬನ್‌ ದ್ವೀಪದ ನಡುವೆ ಸಮುದ್ರದಡಿ ಇರುವಂತಹ ಬೆಣಚುಕಲ್ಲುಗಳ ಸಾಲಿನ ಮಾದರಿಯ ಸೇತುವೆಯಂತಹ ರಚನೆಯನ್ನು ರಾಮಸೇತು ಇಲ್ಲವೇ ಆ್ಯಡಂ ಬ್ರಿಜ್‌ ಎನ್ನಲಾಗುತ್ತದೆ. ಇದನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸಲು ಸುಬ್ರಮಣಿಯನ್‌ ಸ್ವಾಮಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು 2019ರಲ್ಲಿ ಸಭೆ ನಡೆಸಿದ್ದ ಅಂದಿನ ಸಂಸ್ಕೃತಿ ಸಚಿವ ಪ್ರಹ್ಲಾದ್‌ ಪಟೇಲ್‌, ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಈ ಶಿಫಾರಸ್ಸಿನ ಬಳಿಕ ಯಾವುದೇ ಬೆಳವಣಿಗೆಯಾಗಿಲ್ಲವೆಂದು ಸುಪ್ರೀಂಕೋರ್ಟ್‌ನಲ್ಲಿ ಸುಬ್ರಮಣಿಯನ್‌ ಸ್ವಾಮಿ ಆರೋಪ ಮಾಡಿದ್ದಾರೆ.ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿಯವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭ ಗುರುವಾರ ಕೇಂದ್ರ ಸರ್ಕಾರ ಈ ಮಾಹಿತಿಯನ್ನೂ ತಿಳಿಸಿದೆ. ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರ ಪೀಠ ಈ ಕುರಿತಾಗಿ ಅಗತ್ಯ ಬಂದಲ್ಲಿ ನೀವು ಕೇಂದ್ರ ಸರ್ಕಾರಕ್ಕೆ ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಜೊತೆಗೆ ಕೇಂದ್ರ ಸರ್ಕಾರ (central government) ತೆಗೆದುಕೊಳ್ಳುವ ನಿರ್ಧಾರ ನಿಮಗೆ ತೃಪ್ತಿ ನೀಡದೆ ಇದ್ದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಬಹುದು ಎಂದುಸುಬ್ರಮಣಿಯನ್‌ ಸ್ವಾಮಿ ಅವರಿಗೆ ತಿಳಿಸಿದೆ.

ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್‌ ಗೆ ಮಾಹಿತಿ ಸಲ್ಲಿಸಿದ ಸಾಲಿಸಿಟರ್‌ ಜನರಲ್‌ (Solicitor General) ತುಷಾರ್‌ ಮೆಹ್ತಾ (Tushar Mehta), ರಾಮಸೇತುವಿಗೆ ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಸ್ಥಾನಮಾನ ನೀಡುವ ಕುರಿತಾದ ಪ್ರಕ್ರಿಯೆ ಕೇಂದ್ರ ಸಂಸ್ಕೃತಿ ಸಚಿವಾಲಯದಲ್ಲಿ (Union Ministry of Culture) ಪ್ರಗತಿಯಲ್ಲಿರುವ ಕುರಿತು ಮಾಹಿತಿ ನೀಡಿದ್ದಾರೆ. ಇದನ್ನು ನ್ಯಾಯಪೀಠ ಪುರಸ್ಕರಿಸಿದ್ದು ಫೆಬ್ರವರಿಯಲ್ಲಿ ಮುಂದಿನ ವಿಚಾರಣೆ ನಡೆಸುವ ಕುರಿತು ಮಾಹಿತಿ ನೀಡಿದೆ ಎನ್ನಲಾಗಿದೆ.

Leave A Reply

Your email address will not be published.