Ration Card : ಪಡಿತರ ಚೀಟಿದಾರರಿಗೆ ರಾಜ್ಯ ಸರಕಾರದಿಂದ ಗುಡ್‌ನ್ಯೂಸ್‌

ಕಂದಾಯ ಸಚಿವ ಆರ್.ಅಶೋಕ ಅವರು ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ಸಹಯೋಗದಲ್ಲಿ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ರಾಗಿಯ ರಾಶಿಪೂಜೆ ಸಲ್ಲಿಸಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ್ದು ಜೊತೆಗೆ ಸಭೆಯಲ್ಲಿ ಪಡಿತರ ಪ್ರಮಾಣವನ್ನು ಪುನಃ 10 ಕೆಜಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯ ನಿವೇಶನ ರಹಿತರಿಗೆ ಹಕ್ಕುಪತ್ರ ನೀಡುವ ಸಂದರ್ಭದಲ್ಲಿ ಈಗಾಗಲೇ ಸಾಗುವಳಿ ಚೀಟಿ ಹೊಂದಿರುವ ಜನರ ಜಮೀನುಗಳನ್ನು ಪಡೆಯದಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಕಂದಾಯ ಸಚಿವರು ಬದಲಾಗಬಹುದು ಆದರೆ ಜಿಲ್ಲಾಧಿಕಾರಿಗಳು ನಿರಂತರವಾಗಿ ಇರುತ್ತಾರೆ ಎಂದು ಜನರ ಗೊಂದಲಗಳಿಗೆ ಉತ್ತರ ನೀಡಿದರು .

ಕಾರ್ಯಕ್ರಮ ಕುರಿತು ಈ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಎಂಬ ಮಹತ್ವಾಕಾಂಕ್ಷೆಯಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಶೀರ್ಷಿಕೆ ನೀಡಲಾಗಿದೆ. ಈ ಕಾರ್ಯಕ್ರಮ ಇರದಿದ್ದರೆ ಯಾವುದೇ ಜಿಲ್ಲಾಧಿಕಾರಿಗಳು ಗ್ರಾಮಗಳಿಗೆ ಬಂದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿರಲಿಲ್ಲ. ರಾಜ್ಯದ ಎಲ್ಲಾ ಕಡೆ ಈ ಕಾರ್ಯಕ್ರಮ ನಡೆಯುತ್ತಿರುವುದರಿಂದ ಅನೇಕ ಸೌಕರ್ಯಗಳು ಬಡ,ಅರ್ಹ ಫಲಾನುಭವಿಗಳಿಗೆ ಅವರಿರುವ ಕಡೆಗಳಲ್ಲಿಯೇ ದೊರೆಯುತ್ತಿವೆ ಎಂದರು. ಇದುವರೆಗೆ ಸುಮಾರು 15 ಗ್ರಾಮವಾಸ್ತವ್ಯ ಕೈಗೊಳ್ಳಲಾಗಿದ್ದು ಸುಮಾರು 1 ಲಕ್ಷ 18 ಸಾವಿರಕ್ಕೂ ಅಧಿಕ ಫಲಾನುಭವಿಗಳಿಗೆ ವೈಯಕ್ತಿಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಜೊತೆಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪ್ರತಿ ತಿಂಗಳು ಸುಮಾರು 10 ಸಾವಿರ ಕೋಟಿ ರೂ.ಪಿಂಚಣಿಗಳ ವಿತರಣೆಯಾಗುತ್ತಿದೆ ಎಂದರು. ಇನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರು ತಮ್ಮ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದರೆ ತಕ್ಷಣ ಭೂ ಪರಿವರ್ತನೆ ಮಾಡಿಕೊಡಲು ಸುಧಾರಣೆ ಕಾಯ್ದೆ ತರಲಾಗಿದೆ ಎಂದರು.

ಸದ್ಯ ಯುವಕರು, ವಿದ್ಯಾವಂತರು, ಐಟಿಬಿಟಿಗಳಲ್ಲಿ ತೊಡಗಿಸಿಕೊಂಡವರು ರಾಜ್ಯದ ಯಾವುದೇ ಭಾಗದಲ್ಲಿಯಾದರೂ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲಾಗಿದೆ. ಕೃಷಿಯಲ್ಲಿ ಆಧುನಿಕತೆ ತರುವ ಉದ್ದೇಶದಿಂದ ಹಿಂದೆ ಇದ್ದ ಕಾಯ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬರುತ್ತಿದ್ದ ಪಡಿತರ ಸ್ಥಗಿತವಾಗಿರುವದರಿಂದ ಪಡಿತರ ವಿತರಣೆ ಪ್ರಮಾಣ ಇಳಿಕೆಯಾಗಿದೆ. ಇದೀಗ ತಾಂಡಾ, ಮುಜುರೆ, ಹಟ್ಟಿ, ಕ್ಯಾಂಪ್‌ಗಳಿಗೆ ಕಂದಾಯ ಹಕ್ಕುಗಳನ್ನು ನೀಡಿ ಗ್ರಾಮಗಳನ್ನಾಗಿ ಪರಿವರ್ತಿಸಿ ಬಡಜನರಿಗೆ ನ್ಯಾಯ ಒದಗಿಸಲಾಗುತ್ತಿದೆ. ಎಸ್.ಸಿ.ಹಾಗೂ ಎಸ್.ಟಿ.ಮೀಸಲು ಹೆಚ್ಚಳಕ್ಕೆ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ ದೃಢ ಪಡಿಸಿದ್ದಾರೆ. ಜೊತೆಗೆ ಹಿಂದುಳಿದ ಲಿಂಗಾಯತರು ಮತ್ತು ಒಕ್ಕಲಿಗರಿಗೂ ನ್ಯಾಯ ಒದಗಿಸಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಸದ್ಯ ಬೆಂಗಳೂರಿಗೆ ಹೊಂದಿಕೊಂಡು ಅಭಿವೃದ್ಧಿ ಹೊಂದುತ್ತಿರುವ ಹೊಸಕೋಟೆಯವರೆಗೂ ಮುಂಬರುವ ದಿನಗಳಲ್ಲಿ ಮೆಟ್ರೋ ರೈಲು ವಿಸ್ತರಣೆ ಮಾಡಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.

ಹೌದು ಈ ಮೇಲಿನ ಪ್ರತಿಯೊಂದು ಬೆಳವಣಿಗೆಗಳು ಹಂತ ಹಂತವಾಗಿ ನೆರವೇರಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ಸಹಯೋಗದಲ್ಲಿ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಸಭೆಯಲ್ಲಿ ಆಶ್ವಾಸನೆ ನೀಡಿದ್ದಾರೆ.

ಸದ್ಯ ಜನವರಿ-2023ಕ್ಕೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಎನ್ಎಎಫ್‌ಎಸ್ಎ ಅಡಿಯಲ್ಲಿ ಆಹಾರಧಾನ್ಯ ಹಂಚಿಕೆ ಮಾಡಲಾಗಿದ್ದು ತಿಂಗಳಾಂತ್ಯದವರೆಗೂ ಪಡಿತರ ಅಕ್ಕಿ ಪಡೆಯಲು ಅವಕಾಶವಿದೆ ಎಂದು ಹರಪನಹಳ್ಳಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೌದು ಅಂತ್ಯೋದಯ ಕಾರ್ಡಿಗೆ 35 ಕೆ.ಜಿ ಅಕ್ಕಿ, ಆದ್ಯತಾ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ. ಎಪಿಎಲ್ ಪಡಿತರ ಚೀಟಿ ಹೊಂದಿದ ಫಲಾನುಭವಿಗಳಿಗೆ ಪ್ರತಿ ಕೆ.ಜಿಗೆ ರೂ.15 ದರದಲ್ಲಿ ಪಡಿತರ ಅಕ್ಕಿ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.

ಇದೀಗ ಪಡಿತರ ಚೀಟಿದಾರರು ಜನವರಿ ತಿಂಗಳ ಅಂತ್ಯದವರೆಗೂ ಬಯೋಮೆಟ್ರಿಕ್, ಆಧಾರ್ ಅಥವಾ ಓಟಿಪಿ ಮೂಲಕ ಆಹಾರಧಾನ್ಯ ಪಡೆಯಬಹುದಾಗಿದ್ದು ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

Leave A Reply

Your email address will not be published.