ಗಣರಾಜೋತ್ಸವ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ :ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

Share the Article

ಜನವರಿ 26 ರಂದು ಗಣರಾಜೋತ್ಸವ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜನವರಿ 26 ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತರತ್ನ ಡಾ|| ಬಿ.ಆರ್. ಅಂಬೇಡ್ಕರ್ ರವರ ಭಾವ ಚಿತ್ರವನ್ನು ಕಡ್ಡಾಯವಾಗಿ ಇಟ್ಟು ಸಮಾರಂಭವನ್ನು ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ. ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಎಸ್.ಶಿವಲಿಂಗಯ್ಯ ಆದೇಶ ಹೊರಡಿಸಿದ್ದಾರೆ.

ಆದೇಶವನ್ನು ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದು, ಆದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಇಲಾಖೆ ನಿರ್ದೇಶಕರು, ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ.

Leave A Reply