Scholarship : ಆರ್ಥಿಕ ಸಮಸ್ಯೆಯಿರುವ ವಿದ್ಯಾರ್ಥಿಗಳೇ ಈ ವಿದ್ಯಾರ್ಥಿ ವೇತನ ನಿಮಗಾಗಿ | ಇದರ ಬಗ್ಗೆ ಇಲ್ಲಿದೆ ಕಂಪ್ಲೀಟ್‌ ಮಾಹಿತಿ !

ಬಡ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಸರ್ಕಾರವು ಕೆಲವೊಂದು ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡಲು ನಿರ್ಧರಿಸಿದೆ. ಸದ್ಯ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಸಹಾಯವಾಗಲೆಂದು ಈ ಸ್ಕಾಲರ್​ ಶಿಪ್​ಅನ್ನು ಬಳಸಿಕೊಳ್ಳಬಹುದು. ಪ್ರಸ್ತುತ ವಿವಿಧ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಹಲವು ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕ ಸಮಸ್ಯೆಯಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಅತ್ಯುತ್ತಮ ಅವಕಾಶ ಒದಗಿಸಲಿದೆ.

ಈಗಾಗಲೇ 2022-23ನೇ ವರ್ಷದಲ್ಲಿ ಪದವಿ,ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ, ಸರಾಸರಿ ಶೇ.70% ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಕಲಬುರಗಿ ಜಿಲ್ಲೆಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್​ನಲ್ಲಿ ಆನ್ಲೈನ್ ಮೂಲಕ 2023ರ ಫೆಬ್ರವರಿ 8ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರೆಸುವ ಉದ್ದೇಶದಿಂದ ಈ ಮೇಲಿನ ವಿದ್ಯಾರ್ಥಿ ವೇತನ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲಬುರಗಿ ಜಿಲ್ಲಾ ಅಧಿಕಾರಿಗಳು ಮಾಹಿತಿ ನೀಡಿದ್ದು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಸದ್ಯ ಕಲಬುರಗಿ ಜಿಲ್ಲೆಯ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಈ ಮೇಲಿನ ವಿದ್ಯಾರ್ಥಿ ವೇತನ ಸೌಲಭ್ಯದ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಮತ್ತು ಸಹಾಯವಾಣಿ 8050770004 ಸಂಖ್ಯೆಗೆ ಕಚೇರಿ ಸಮಯದಲ್ಲಿ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5.30ರ ಗಂಟೆಯವರೆಗೆ ಸಂಪರ್ಕಿಸಲು ಅವಕಾಶ ನೀಡಲಾಗಿದೆ.

Leave A Reply

Your email address will not be published.