ಬೆಂಗಳೂರು : ಫ್ಲೈ ಓವರ್ ನಿಂದ ಹಣದ ಮಳೆ ಸುರಿಸಿದ ವ್ಯಕ್ತಿ ಖಾಕಿ ವಶಕ್ಕೆ!

Share the Article

ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಫ್ಲೈ ಓವರ್ ಮೇಲೆ ಇಂದು ಮಧ್ಯಾಹ್ನ ವ್ಯಕ್ತಿಯೊಬ್ಬ ಬಂದು ಹಣ ಎಸೆದ ಘಟನೆ ವರದಿಯಾಗತ್ತು. ಸದ್ಯ , ಹಣ ಎಸೆದ ವ್ಯಕ್ತಿಯನ್ನು ಅರುಣ್ ಎಂದು ಗುರುತಿಸಲಾಗಿದ್ದು, ಈತನನ್ನು ಖಾಕಿ ಪಡೆ ವಶಕ್ಕೆ ಪಡೆದುಕೊಂಡು ಎಂದು ವರದಿಯಾಗಿದೆ.

ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಏಕಾಏಕಿ ಮೇಲಿಂದ ಹಣ ಸುರಿಯುವುದನ್ನು ಕಂಡು ಆಶ್ಚರ್ಯಗೊಂಡಿದ್ದರು. ಈ ಪ್ರಕರಣದ ಕುರಿತಾಗಿ ತನಿಖೆ ನಡೆಸಿದ ಪೊಲೀಸರಿಗೆ ನಾಗರಬಾವಿಯ ಯೂಟ್ಯೂಬ್ ಚಾನಲ್ ಕಚೇರಿಯಲ್ಲಿ ಹಣ ಎಸೆದ ವ್ಯಕ್ತಿ ಇರುವುದನ್ನು ಅರಿತು, ಕಚೇರಿಗೆ ದಿಢೀರ್ ಭೇಟಿ ನೀಡಿ ಆರೋಪಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಫ್ಲೈ ಓವರ್‌ನಿಂದ ಹಣ ಎಸೆದ ಘಟನೆ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ 92ಡಿ, ಐಪಿಸಿ 283ರ ಅಡಿ ಎನ್‌ಸಿಆರ್ ಪ್ರಕರಣ ದಾಖಲಿಸಿದ ಕೆ.ಆರ್.ಮಾರ್ಕೆಟ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave A Reply