Pension Updates : ಹಳೆ ಪೆನ್ಷನ್ ಯೋಜನೆಯ ಕುರಿತು ಇಲ್ಲಿದೆ ಒಂದು ಅಪ್ಡೇಟ್!

ನಿವೃತ್ತಿಯ ನಂತರದ ಜೀವನಕ್ಕಾಗಿ ಹೂಡಿಕೆ ಮಾಡಲು ಬಯಸುವವರಿಗೆ ಇರುವ ಉತ್ತಮ ಆಯ್ಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಒಂದಾಗಿದ್ದು, ಉದ್ಯೋಗವನ್ನು ಆರಂಭಿಸಿದ ತಕ್ಷಣ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ದೊಡ್ಡ ಮೊತ್ತವನ್ನು ಪಡೆಯಬಹುದು.ಭಾರತ ಸರ್ಕಾರವು ತನ್ನ ನಾಗರಿಕರಿಗೆ 2003 ರಲ್ಲಿ ಹೊಸ ಪಿಂಚಣಿ ಯೋಜನೆಯನ್ನು ಪರಿಚಯಿಸಿದ್ದು, ಈ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ 2004 ರಲ್ಲಿ ಜಾರಿಗೆ ತರಲಾಗಿದೆ.

ದೇಶದ ನಾಗರಿಕರಿಗೆ ವ್ಯಾಖ್ಯಾನಿಸಲಾದ ಕೊಡುಗೆ ಪಿಂಚಣಿಯನ್ನು ಒದಗಿಸುವ ನಿಟ್ಟಿನಲ್ಲಿ ಎನ್‌ಪಿಎಸ್‌ ಕಾರ್ಯನಿರ್ವಹಿಸುತ್ತಿದೆ. ಹೊಸ ಯೋಜನೆಯನ್ನು ಅಸ್ತಿತ್ವದಲ್ಲಿರುವ ಹಳೆಯ ಪಿಂಚಣಿ ಯೋಜನೆಗೆ ಪರ್ಯಾಯವಾಗಿ ಆರಂಭಿಸಲಾಗಿದ್ದು, ದೇಶದ ನಾಗರಿಕರಿಗೆ ಹೆಚ್ಚು ಸುರಕ್ಷಿತ ಮತ್ತು ಸ್ಥಿರ ನಿವೃತ್ತಿ ಆದಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದಾಗಿ ಅಲ್ಲಿನ ಪ್ರತಿಪಕ್ಷ ನಾಯಕ ಕಮಲ್ ನಾಥ್ ಘೋಷಿಸಿದ್ದಾರೆ. ಆದರೆ, ಇದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಎಂಬುದನ್ನು ಗಮನಿಸಬೇಕು. ದೇಶದಲ್ಲಿ ಹಳೆಯ ಪಿಂಚಣಿ ಯೋಜನೆ (OPS) ಮರುಸ್ಥಾಪನೆಯ ಕುರಿತಂತೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ.

ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್) ಸ್ಥಗಿತಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ದೇಶಾದ್ಯಂತ ನೌಕರರು ಅನೇಕ ದಿನಗಳಿಂದ ಬೇಡಿಕೆ ಇಡುತ್ತಿರುವುದಲ್ಲದೆ ಒತ್ತಡ ಕೂಡ ಹೇರಿದ್ದಾರೆ. ಸದ್ಯ ಕಾಂಗ್ರೆಸ್ ಸರ್ಕಾರವಿರುವ ಕೆಲವು ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದಾಗಿ ಘೋಷಿಸಿವೆ. ಛತ್ತೀಸ್‌ಗಢ, ರಾಜಸ್ಥಾನ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ದೆಹಲಿ ಹೈಕೋರ್ಟ್‌ನ ತೀರ್ಪಿನಲ್ಲಿ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಎಲ್ಲಾ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಆದೇಶವನ್ನು ನೀಡಲಾಗಿದೆ. ಇದಲ್ಲದೆ, ಈ ಕುರಿತು ಅಗತ್ಯ ಮಾರ್ಗಸೂಚಿಗಳನ್ನು ಎಂಟು ವಾರಗಳಲ್ಲಿ ನೀಡುವಂತೆ ನ್ಯಾಯಾಲಯ ಕೇಂದ್ರಕ್ಕೆ ಸೂಚನೆ ನೀಡಿದೆ ಎನ್ನಲಾಗಿದೆ. ಕಚೇರಿ ಜ್ಞಾಪಕ ಪತ್ರವನ್ನು ತಿರಸ್ಕರಿಸಲಾಗಿದ್ದು, ಹಣಕಾಸು ಸಚಿವಾಲಯದ 2003 ರ ಅಧಿಸೂಚನೆ ಮತ್ತು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯ 2020 ರ ಆಫೀಸ್ ಮೆಮೊರೆಂಡಮ್ ಅನ್ನು ಹೈಕೋರ್ಟ್ ತಿರಸ್ಕರಿಸಿದೆ. ಜನವರಿ 1, 2004 ರ ಜಾಹೀರಾತಿನ ಅನುಸಾರ, ಕೇಂದ್ರ ಅರೆಸೇನಾ ಪಡೆಗಳಲ್ಲಿ ನೇಮಕಗೊಂಡ ಸಿಬ್ಬಂದಿಗಳು ಹಳೆಯ ಪಿಂಚಣಿ ಯೋಜನೆಯ ಅನುಕೂಲ ಗಳಿಂದ ವಂಚಿತರಾಗಿದ್ದಾರೆ.

ಹಳೆಯ ಪಿಂಚಣಿ ಮರುಸ್ಥಾಪನೆಗೆ ಸಂಬಂಧಿಸಿದಂತೆ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರಾಡ್ ಅವರು ಕಳೆದ ದಿನಗಳಲ್ಲಿ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು. ಈ ನಡುವೆ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಎಲ್ಲಾ ಸಿಬ್ಬಂದಿ ಹಳೆಯ ಪಿಂಚಣಿ ಯೋಜನೆಯ ಅನುಕೂಲವನ್ನು ಪಡೆಯಲಿದ್ದಾರೆ. ಮಧ್ಯಪ್ರದೇಶದಲ್ಲೂ ಪ್ರತಿಪಕ್ಷ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅಧಿಕಾರಕ್ಕೆ ಬಂದ ಮೇಲೆ ಹಳೆಯ ಪಿಂಚಣಿಯನ್ನು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ. ಆದರೆ, ಇದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Leave A Reply

Your email address will not be published.