SBI Recruitment 2023: ಎಸ್ಬಿಐ ನಲ್ಲಿ ಉದ್ಯೋಗವಕಾಶ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಫೆ.9 ಕೊನೆಯ ದಿನಾಂಕ
SBI SCO Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿ. ಹುದ್ದೆ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : ಉಪಾಧ್ಯಕ್ಷ (Transformation)- 1 ಹುದ್ದೆ
ಪ್ರೋಗ್ರಾಂ ಮ್ಯಾನೇಜರ್ – 4 ಹುದ್ದೆಗಳು
ಮ್ಯಾನೇಜರ್ (Quality & Training)- 1 ಹುದ್ದೆ
ಕಮಾಂಡ್ ಸೆಂಟರ್ ಮ್ಯಾನೇಜರ್ – 3 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 9, 2023
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BCA, B.Sc ಅಥವಾ B.Tech ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇನ್ನು ತಾಂತ್ರಿಕ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಕಮಾಂಡ್ ಸೆಂಟರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇದಲ್ಲದೇ ಮೂರರಿಂದ ಐದು ವರ್ಷಗಳ ಅನುಭವ ಇದ್ದವರಿಗೆ ಆದ್ಯತೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲೀಸ್ಟ್ ಮಾಡಿ ನಂತರ ಸಂದರ್ಶನ ಮತ್ತು ಸಿಟಿಸಿ ಸಮಾಲೋಚನೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ – ರೂ. 750
SC, ST, ದಿವ್ಯಾಂಗ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ: ಉಪಾಧ್ಯಕ್ಷ ಹುದ್ದೆಗಳಿಗೆ ಗರಿಷ್ಠ ವಯೋಮಿತಿ- 50 ವರ್ಷಗಳು
ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯಸ್ಸು- 35 ವರ್ಷಗಳು
ಮ್ಯಾನೇಜರ್ ಮತ್ತು ಕಮಾಂಡ್ ಸೆಂಟರ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ ವಯೋಮಿತಿ- 40 ವರ್ಷಗಳು
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ