BIGG NEWS: ದ್ವಿಚಕ್ರ ವಾಹನ ಸವಾರರಿಗೆ ಮುಖ್ಯ ಮಾಹಿತಿ : ‘ಹಾಫ್ ಹೆಲ್ಮೆಟ್ ‘ ಧರಿಸಿ ವಾಹನ ಚಾಲನೆ ಮಾಡಿದ್ರೆ ನಿಮ್ಗೆ ಫೈನ್ ಬೀಳೋದು ಗ್ಯಾರಂಟಿ!!

ಬೆಂಗಳೂರು ನಗರ ಸಂಚಾರ ಪೊಲೀಸರು ಈಗಾಗಲೇ ಹೊಸ ಅಸ್ತ್ರ ಪ್ರಯೋಗ ನಡೆಸಿ ರೂಲ್ಸ್ ಬ್ರೇಕ್ ಮಾಡುವವರ ವಿರುದ್ಧ ಕ್ರಮ ವಿರುಧ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಇದೀಗ, ಬೈಕ್ ಸವಾರರಿಗೆ ಬೆಂಗಳೂರಿನ ಸಂಚಾರಿ ಪೊಲೀಸರು ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.


ಸರ್ಕಾರ ಎಷ್ಟೇ ರೂಲ್ಸ್ ಮಾಡಿದರು ಕೂಡ ಕ್ಯಾರೇ ಎನ್ನದೆ ರೂಲ್ಸ್ ಬ್ರೇಕ್ ಮಾಡಿ.. ನಾವಿರೋದೆ ಹಿಂಗೆ ಅನ್ನೋ ರೀತಿ ಸಂಚಾರಿ ಪೊಲೀಸರನ್ನು ಕಂಡ ಕೂಡಲೇ ಜೂಟ್ ಹೇಳುವವರೇ ಹೆಚ್ಚು. ಈ ರೀತಿ ಸಂಚಾರಿ ನಿಯಮಗಳನ್ನು ಪಾಲಿಸದೆ ಅಪಾಯಗಳಿಗೆ ಆಹ್ವಾನ ಕೊಟ್ಟಂತೆ ಆಗಿರುವ ಅನೇಕ ಪ್ರಸಂಗಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ. ಹಾಗಾಗಿ, ಹೀಗೆ ರೂಲ್ಸ್ ಬ್ರೇಕ್ ಮಾಡುವವರಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಬೆಂಗಳೂರಿನ ಸಂಚಾರಿ ಪೊಲೀಸರು ಹೊಸ ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಬೈಕ್ ಸವಾರರಿಗೆ ಬೆಂಗಳೂರಿನ ಸಂಚಾರಿ ಪೊಲೀಸರು ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಟೋಪಿ ಮಾದರಿಯ ಅರ್ಧ ಹೆಲ್ಮೆಟ್ ಅಥವಾ ISI ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿದವರಿಗೆ ದಂಡ ವಿಧಿಸಿ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಪ್ರೇರೇಪಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಾಫ್ ಹೆಲ್ಮೆಟ್ ಇಲ್ಲವೇ ಕಳಪೆ ಗುಣಮಟ್ಟದ ಹೆಲ್ಮೆಟ್ ಧರಿಸುವ ದ್ವಿಚಕ್ರ ವಾಹನ ಸವಾರ ಹಾಗೂ ಹಿಂಬದಿ ಸವಾರರ ಮೇಲೂ ಸಂಚಾರ ವಿಭಾಗದ ಪೊಲೀಸರು ದಂಡ ಪ್ರಯೋಗ ಆರಂಭಿಸಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಅರ್ಧ ಹೆಲ್ಮೆಟ್ ಅನ್ನು ಹೆಲ್ಮೆಟ್ ರಹಿತ ಚಾಲನೆಯೆಂದು ಪರಿಗಣಿಸಿ ದಂಡ ವಿಧಿಸುತ್ತಿದ್ದಾರೆ. ಮೋಟಾರು ವಾಹನ ನಿಯಮಗಳ 1989 ನಿಯಮ 230(1) ಕ್ಕೆ ತಿದ್ದುಪಡಿಯಲ್ಲಿ ರಾಜ್ಯವ್ಯಾಪಿ ಬೈಕ್ ಸವಾರ ಮತ್ತು ಹಿಂಬದಿ ಸವಾರರು ಐಎಸ್ ಐ ಮುದ್ರೆಯ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಗಳನ್ನು ಧರಿಸಿಕೊಂಡು ಸವಾರಿ ಮಾಡುತ್ತಿದ್ದು, ಟೋಪಿ ಮಾದರಿಯ ಹೆಲ್ಮೆಟ್ ಗಳನ್ನು ಧರಿಸಿ ವಾಹನ ಚಾಲನೆ ಮಾಡುವಾಗ ಅಪಾಯಗಳಿವೆ ಎಡೆ ಮಾಡಿಕೊಡುವ ಪ್ರಮೇಯ ಹೆಚ್ಚಿರುವ ಹಿನ್ನೆಲೆ ಈ ಮಾದರಿಯ ಹೆಲ್ಮೆಟ್ ಅನ್ನು ಹೆಲ್ಮೆಟ್ ರಹಿತ ಚಾಲನೆ ಎಂದು ಪರಿಗಣಿಸಿ 500 ರೂ. ದಂಡ ವಿಧಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಳೆದ ಎರಡು ತಿಂಗಳಲ್ಲಿ ಹಾಫ್ ಹೆಲ್ಮೆಟ್ ಧರಿಸಿದವರನ್ನು ಒಳಗೊಂಡು ಹೆಲ್ಮೆಟ್ ಧರಿಸದ ಸವಾರರ ವಿರುದ್ಧ ಸರಿ ಸುಮಾರು 13 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎನ್ನಲಾಗಿದೆ.

Leave A Reply

Your email address will not be published.