BREAKING NEWS : 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ : ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ( Karnataka Teacher Recruitment )ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ನಡೆಸಿದ ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಸದ್ಯ ಈ ಪಟ್ಟಿಯನ್ನು ಇದೀಗ ಕರ್ನಾಟಕ ಹೈಕೋರ್ಟ್ನ ಏಕ ಸದಸ್ಯ ನ್ಯಾಯಪೀಠವು ರದ್ದು ಮಾಡಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಅನೇಕ ಅಭ್ಯರ್ಥಿಗಳು ಹೈಕೋರ್ಟ್ ಗೆ ( Karnataka High Court ) ರಿಟ್ ಅರ್ಜಿ ಸಲ್ಲಿಸಿದ ಹಿನ್ನೆಲೆ ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿದೆ ಎನ್ನಲಾಗಿದೆ.

ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು ನ್ಯಾಯಾಲಯದಲ್ಲಿ ಜಾತಿ, ಆದಾಯ ಪ್ರಮಾಣ ಪತ್ರವನ್ನು ( Cast and Income Certificate ) ಪರಿಶೀಲನೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ( Education Department ) ಪ್ರಕಟಿಸಿದನ್ನು ಖಂಡಿಸಿದೆ. ಇದು ನಿಯಮ ಬಾಹಿರ ಕ್ರಮವಾಗಿದ್ದು, ಹೀಗಾಗಿ, ಕಾನೂನು ಬಾಹಿರವಾಗಿರುವಂತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸುವಂತೆ ಸೂಚಿಸಲಾಗಿದೆ. ಇದಲ್ಲದೆ, ತಂದೆಯ ಜಾತಿ, ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸುವಂತೆ ನ್ಯಾಯಪೀಠಕ್ಕೆ ಸೂಚಿಸುವಂತೆ ಮನವಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಪ್ರಕಟಿಸಿದ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ( Provisional Selection List of Primary School Teachers ) ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.