ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿ ಕಡಿತ : ಸರ್ಕಾರದ ಸುತ್ತೋಲೆ, ಅವಧಿ ನಿಗದಿ ಇಲ್ಲಿದೆ

Share the Article

ಮಹಿಳಾ ಮತ್ತು ಕಲ್ಯಾಣ ಇಲಾಖೆ ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿದೆ. ಈ ವಿಷಯದ ಬಗ್ಗೆ ಸುತ್ತೋಲೆಯನ್ನು ಸರಕಾರ ಹೊರಡಿಸಿದ್ದು ಬೆಳಗ್ಗೆ ಹತ್ತು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಶಿಕ್ಷಣ ನೀಡುವಂತೆ ಸೂಚಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ 2011ರಲ್ಲಿ ಶಿಕ್ಷಣದ ಅವಧಿ ಬೆಳಗ್ಗೆ 9.30ರಿಂದ ಸಂಜೆ 4ಗಂಟೆಯವರೆಗೆ ಇರುವಂತೆ ಆದೇಶಿಸಲಾಗಿತ್ತು.

ಈಗ ಇದನ್ನು ಬದಲಿಸಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯವರೆಗೆ ಮಾಡಲು ಅವಧಿ ನಿಗದಿ ಪಡಿಸಲಾಗಿದೆ. ಈ ಕುರಿತು ಸುತ್ತೋಲೆ ಪ್ರಕಟವಾಗಿದೆ.

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಫಲಾನುಭವಿಗಳು ಮತ್ತು ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಯ ಪೋಷಕರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾದರೆ ಅಥವಾ ಚರ್ಚೆ ನಡೆಸಬೇಕಾದರೆ ಮಧ್ಯಾಹ್ನ 2 ಗಂಟೆಯ ನಂತರ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಬೇಕು. ಈ ಸೂಚನೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

Leave A Reply

Your email address will not be published.