DHFWS Recruitment 2023: ಸರಕಾರಿ ನೌಕರಿ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗವಕಾಶ | 22 ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಲು ಫೆ.22 ಕೊನೆಯ ದಿನಾಂಕ

DHFWS Chitradurga Recruitment 2023: NHM ಯೋಜನೆಯಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ: 22
ಉದ್ಯೋಗ ಸ್ಥಳ: ಚಿತ್ರದುರ್ಗ – ಕರ್ನಾಟಕ
ಹುದ್ದೆಯ ಹೆಸರು: ಸ್ಟಾಫ್ ನರ್ಸ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಫೆಬ್ರವರಿ 22, 2023

ವಿದ್ಯಾರ್ಹತೆ : ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ GNM ನರ್ಸಿಂಗ್ ಮಾಡಿರಬೇಕು. ಜೊತೆಗೆ ಈ ಕ್ಷೇತ್ರದಲ್ಲಿ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ 45 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇನ್ನು ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿಡಿ ಸಡಿಲಿಕೆಯನ್ನು ಕೂಡ ನೀಡಲಾಗಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 13,225 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್​ ಮಾಡಲಾಗುತ್ತದೆ. ಆ ಬಳಿಕ ಲಿಖಿತ ಪರೀಕ್ಷೆ ಇರಲಿದ್ದು, ಇದಾದ ನಂತರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಬೇಕಾದ ವಿಳಾಸ : District Project Management Unit (N.H.M), District Laboratory Premises, Back to District Hospital, Chitradurga

ಹೆಚ್ಚಿನ ವಿವರಗಳಿಗಾಗಿ ಈ ಮೊಬೈಲ್​ ಸಂಖ್ಯೆಯನ್ನು ಸಂಪರ್ಕಿಸಿ: 9449843104

ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಅಧಿಕೃತ ವೆಬ್​ಸೈಟ್​ chitradurga.nic.in ಗೆ ಭೇಟಿ ನೀಡಬಹುದು.

ಹುದ್ದೆಯ ವಿವರವಾದ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Leave A Reply

Your email address will not be published.