Home Interesting ಮಹಿಳೆಯ ಮೇಲೆ ದೌರ್ಜನ್ಯವೆಸಗಿ ಭೀಕರವಾಗಿ ಹತ್ಯೆಗೈದ 16ರ ಬಾಲಕ!!

ಮಹಿಳೆಯ ಮೇಲೆ ದೌರ್ಜನ್ಯವೆಸಗಿ ಭೀಕರವಾಗಿ ಹತ್ಯೆಗೈದ 16ರ ಬಾಲಕ!!

Hindu neighbor gifts plot of land

Hindu neighbour gifts land to Muslim journalist

ದಿನಂಪ್ರತಿ ಒಂದಲ್ಲ ಒಂದು ಅಪರಾಧ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಅದರಲ್ಲಿಯೂ ಮಹಿಳೆಯರ ಮೇಲಿನ ದೌರ್ಜನ್ಯಗಳು ನಡೆದಾಗ ಕೆಲವರು ಮನೆಯವರ ಗೌರವಕ್ಕೆ ಅಂಜಿ ಮೌನ ತಳೆದರೆ ಮತ್ತೆ ಕೆಲ ಮಹಿಳೆಯರು ತಮ್ಮ ವಿರುದ್ಧ ನಡೆಯುವ ದೌರ್ಜನ್ಯವನ್ನು ಪ್ರಶ್ನಿಸಿ ದ್ವನಿ ಎತ್ತುತ್ತಾರೆ. ಇದೀಗ, ಮಧ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರ ದೌರ್ಜನ್ಯ ಎಸಗಿದ್ದು ಮಾತ್ರವಲ್ಲದೆ ವಿಕೃತವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ 16 ವರ್ಷದ ಬಾಲಕ 58 ವರ್ಷದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಆಕೆಯ ಬಾಯಿಯನ್ನು ಬಿಗಿದು ಭೀಕರವಾಗಿ ಹೊಡೆದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಬಾಲಕ ಮೊಬೈಲ್ ಫೋನ್ ಕದ್ದಿದ್ದಾನೆ ಎಂದು ಮಹಿಳೆಯ ಮನೆಯವರು ಆರೋಪ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಹುಡುಗ ಅದಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಈ ಭೀಕರ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಜನವರಿ 30 ರಂದು ರಾತ್ರಿ ಈ ಘಟನೆ ನಡೆದಿದ್ದು, ಯುವಕ ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಮತ್ತು ಬಟ್ಟೆಯನ್ನು ತುಂಬಿಸಿ ಆಕೆ ವಾಸವಿದ್ದ ಕಟ್ಟಡದ ನಿರ್ಮಾಣ ಹಂತದ ಭಾಗಕ್ಕೆ ಎಳೆದೊಯ್ದು ಆಕೆಯ ತಲೆ ಮತ್ತು ದೇಹದ ಇತರ ಭಾಗಗಳಿಗೆ ಮಾರಕಾಯುಧದಿಂದ ಬರ್ಬರವಾಗಿ ಹೊಡೆದದ್ದು ಮಾತ್ರವಲ್ಲದೆ ಅಮಾನುಷವಾಗಿ ಆಕೆಯ ಖಾಸಗಿ ಭಾಗಗಳಿಗೆ ಗಾಯಮಾಡಿ ಭೀಭತ್ಸವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಮಧ್ಯಪ್ರದೇಶದಲ್ಲಿ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ. ಸದ್ಯ ಬಾಲಕನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆಯ ವೇಳೆ ತಾನು ಎಸಗಿದ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ ಆರೋಪಿ ಬಾಲಕನನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದ್ದು ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.