ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದೆ, ಅಲ್ಲಿ ಹೊಸ ಮಕ್ಕಳು ಹುಟ್ಟಲಾರವು – ಲಕ್ಷ್ಮಣ್ ಸವದಿ‌ ಹೇಳಿಕೆ

Share the Article

ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈಗ ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಕಾಂಗ್ರೆಸ್ ನ ತಾಯಿ ಬಂಜೆಯಾಗಿದೆ, ಮಕ್ಕಳು ಹುಟ್ಟುವ ಪ್ರಶ್ನೆಯಿಲ್ಲ ಎಂದು ರಾಜ್ಯ ಬಿಜೆಪಿ ಲಕ್ಷ್ಮಣ್ ಸವದಿ ಲೇವಡಿ ಮಾಡಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಇನ್ನು ಕೇವಲ 50 ದಿನದಲ್ಲಿ ಉರುಳುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಣ ಸವದಿ ಅಥಣಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ನವರರು ಹಗಲು ಕನಸು ಕಾಣುತ್ತಿದ್ದಾರೆ. ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದೆ. ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಕಾಂಗ್ರೆಸ್ ನವರು ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಬಾಲಚಂದ್ರ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ಅವರು ಹೇಳಿಕೆ ನೀಡಿದ್ದಾರೆ. ಆ ಎರಡು ಹೇಳಿಕೆಗಳನ್ನು ನೀವು ಗಮನಿಸಿರಬಹುದು : ರಮೇಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್ ವೈಯಕ್ತಿಕ ವಿವಾದ. ಈ ವಿಚಾರಗಳು ಬಿಜೆಪಿ ಪಕ್ಷಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧಿಸಿಲ್ಲ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಕ್ಕೆ ಆಗೋದಿಲ್ಲ, ಅದು ಸರಿಯಲ್ಲ. ಈ ಸಂದರ್ಭ ಮಾತಾಡಿದ ಅವರು ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಸವದಿ ಹೇಳಿದ್ದಾರೆ.

Leave A Reply