ಬಿ.ವೈ.ವಿಜಯೇಂದ್ರ ಅವರಿಗೆ ಬಿಜೆಪಿಯಿಂದ ದೊಡ್ಡ ಜವಾಬ್ದಾರಿ

Share the Article

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಬಿಜೆಪಿ ದೊಡ್ಡ ಜವಾಬ್ದಾರಿ ನೀಡಿದೆ.

ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಮಧ್ಯೆ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದ ಬಿಜೆಪಿ ಇದೀಗ ಅವರ ಪುತ್ರ ವಿಜಯೇಂದ್ರಗೆ ಹೊಸ ಜವಾಬ್ದಾರಿ ನೀಡಿದೆ.

ಬಿಜೆಪಿಯ ಏಳು ಮೋರ್ಚಾ ಗಳ ಜಿಲ್ಲಾ ಸಮಾವೇಶದ ಸಂಚಾಲಕರಾಗಿ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.

10 ಮಂದಿ ಸದಸ್ಯರ ಸಮಿತಿಯ ನೇತೃತ್ವವನ್ನು ವಿಜಯೇಂದ್ರ ಮುನ್ನಡೆಸಲಿದ್ದಾರೆ.

Leave A Reply