ಜಿಲ್ಲಾ ನ್ಯಾಯಾಲಯಗಳಲ್ಲಿ ಉದ್ಯೋಗ ಅವಕಾಶ | ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ಆದ್ಯತೆ
ಬೆಳಗಾವಿ ಜಿಲ್ಲೆಯ ಪ್ರಧಾನ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರು, ಸಿಪಾಯಿ, ಆದೇಶ ಜಾರಿಕಾರರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಆದೇಶ ಜಾರೀಕಾರರು ಮತ್ತು ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿತ್ತು ಆದರೆ ಈ ಹಿಂದೆ ಅಧಿಸೂಚಿಸಿ, ಅರ್ಹ ಅಭ್ಯರ್ಥಿಗಳು ಸಿಗದೇ ಇರುವ ಕಾರಣ ಉಳಿದ ಈ ಕೆಳಗಿನ ಪೋಸ್ಟ್‌ಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ, ಅರ್ಹತೆ, ವೇತನ ಶ್ರೇಣಿ ಮಾಹಿತಿಗಳು :
- ಶೀಘ್ರಲಿಪಿಗಾರರು ಗ್ರೇಡ್-3 : 18
ವೇತನ ಶ್ರೇಣಿ ರೂ.27650-52650. ಜತೆಗೆ ವಿಶೇಷ ಭತ್ಯೆ ನೀಡಲಾಗುವುದು.
ವಿದ್ಯಾರ್ಹತೆ : ಪಿಯುಸಿ ಪಾಸ್ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೊಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸೀನಿಯರ್ ಗ್ರೇಡ್) ಮತ್ತು ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆ ಪಾಸ್ ಮಾಡಿರಬೇಕು.
- ಆದೇಶ ಜಾರೀಕಾರರು : 06
ವೇತನ ಶ್ರೇಣಿ ರೂ.19950-37900 ಜತೆಗೆ ವಿಶೇಷ ಭತ್ಯೆಗಳು.
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಪಾಸ್, ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. - ಸಿಪಾಯಿ : 44
ವೇತನ ಶ್ರೇಣಿ ರೂ.17000- 28950.
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಪಾಸ್ ಆಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. - ವಯಸ್ಸಿನ ಅರ್ಹತೆಗಳು
ಆನ್‌ಲೈನ್ ಅಪ್ಲಿಕೇಶನ್ ಹಾಕುವ ಕೊನೆ ದಿನಾಂಕದೊಳಗೆ ಕನಿಷ್ಠ ವಯೋಮಿತಿ 18 ವರ್ಷ ಪೂರೈಸಿರಬೇಕು. ಗರಿಷ್ಠ 35 ವರ್ಷ ವಯೋಮಿತಿ ದಾಟಿರಬಾರದು. ಜಾತಿವಾರು ಮೀಸಲಾತಿ ನಿಯಮ ಅನ್ವಯವಾಗಲಿದೆ. ಈ ಪ್ರಕಾರ ಒಬಿಸಿ ಅಭ್ಯರ್ಥಿಗಳು 38 ವರ್ಷದವರೆಗೆ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳು 40 ವರ್ಷದವರೆಗೆ ಅರ್ಜಿ ಹಾಕಬಹುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03-03-2023 ರ ರಾತ್ರಿ 11.59 ಗಂಟೆವರೆಗೆ.
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 07-03-2023.
ಅರ್ಜಿ ಶುಲ್ಕವನ್ನು ನಿಗದಿತ ಅವಧಿಯೊಳಗೆ ಎಸ್‌ಬಿಐ’ನ ಯಾವುದೇ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸಬೇಕು. ಅಥವಾ ಆನ್‌ಲೈನ್ ಮೂಲಕ ಪಾವತಿ ಮಾಡಬಹುದು.
ಅರ್ಜಿ ಸಲ್ಲಿಸುವುದು ವಿಧಾನ :
ಅರ್ಜಿಗಳನ್ನು ಬೆಳಗಾವಿಯ ಜಿಲ್ಲಾ ನ್ಯಾಯಾಲಯ ವೆಬ್‌ಸೈಟ್ https://districts.ecourts.gov.in/belagavi-onlinerecruitment ಗೆ ಭೇಟಿ ನೀಡಿ, ಕೇಳಲಾದ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಬೇಕು.
- ಅಭ್ಯರ್ಥಿಗಳ ಆಯ್ಕೆ ವಿಧಾನ :
ಪ್ರತಿ ಹುದ್ದೆಗೆ ನಿಗದಿತ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ. ಶೀಘ್ರಲಿಪಿಗಾರರು ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಟೈಪಿಂಗ್ ಟೆಸ್ಟಿಂಗ್ ನೀಡಲಾಗುತ್ತದೆ. 5 ನಿಮಿಷಗಳ ಕಾಲ, ಒಂದು ನಿಮಿಷಕ್ಕೆ 120 ಪದಗಳಂತೆ ಟೈಪ್ ಮಾಡಬೇಕು. ಒಟ್ಟು 100 ಅಂಕಗಳಿಗೆ ಪರೀಕ್ಷೆ ನಡೆಸಲಿದ್ದು, ಕನಿಷ್ಠ 50 ಅಂಕಗಳಿಸಬೇಕಿರುತ್ತದೆ.
ಸದ್ಯ ಬೆಳಗಾವಿ ಜಿಲ್ಲೆಯ ಪ್ರಧಾನ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರು, ಸಿಪಾಯಿ, ಹುದ್ದೆಗಳಲ್ಲಿ ಆಸಕ್ತಿ ಇರುವವರು ಮೇಲಿನ ಮಾಹಿತಿಗಳನ್ನು ತಿಳಿದು ನಿಯಮ ಅನುಸಾರ ಅರ್ಜಿ ಸಲ್ಲಿಸಬಹುದಾಗಿದೆ.