Bangalore Urban DC Office Recruitment 2023 : ಡಿಸಿ ಆಫೀಸಿನಲ್ಲಿ ಉದ್ಯೋಗವಕಾಶ | ಆಸಕ್ತರು ಅರ್ಜಿ ಸಲ್ಲಿಸಿ

Share the Article

ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 08,2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 15, 2023

ಹುದ್ದೆ : ಲೋಡರ್ಸ್ – 83 ಮತ್ತು ಕ್ಲೀನರ್ಸ್ 22
ಒಟ್ಟು ಹುದ್ದೆ : 105

ವಿದ್ಯಾರ್ಹತೆ : ಅನ್ವಯಿಸುವುದಿಲ್ಲ. ಈ ಹುದ್ದೆಗೆ ಕನ್ನಡ ಮಾತನಾಡಲು ಗೊತ್ತಿರಬೇಕು. ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ 2 ವರ್ಷಕ್ಕಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಲೋಡರ್ಸ್ ಮತ್ತು ಕ್ಲೀನರ್ಸ್ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕ : ಇಲ್ಲ

ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 55 ವರ್ಷ ಆಗಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಳಾಸ : ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, 4ನೇ ಮಹಡಿ, ಬೆಂಗಳೂರು ನಗರ ಜಿಲ್ಲೆ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ ನಗರಸಭೆ, ಮಾದನಾಯಕನಹಳ್ಳಿ ನಗರಸಭೆ, ಆನೇಕಲ್ ಪುರಸಭೆ, ಅತ್ತಿಬೆಲೆ ಪುರಸಭೆ, ಬೊಮ್ಮಸಂದ್ರ ಪುರಸಭೆ, ಚಂದಾಪುರ ಪುರಸಭೆ, ಜಿಗಣಿ ಪುರಸಭೆ, ಹುಣಸಮಾರನಹಳ್ಳಿ ಪುರಸಭೆ, ಚಿಕ್ಕಬಾಣಾವರ ಪುರಸಭೆಗಳಲ್ಲಿ ಕೆಲಸ ನಿರ್ವಹಿಸಬೇಕು.

Leave A Reply