Mysore : ಕಾಲೇಜಿನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!

Share the Article

ಮೈಸೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

 

ನಮಿತಾ ದ್ವಿತೀಯ ಪಿಯುಸಿ (second puc) ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನಡೆದ ಡ್ಯಾನ್ಸ್​ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಡಾನ್ಸ್ ಕಾರ್ಯಕ್ರಮ ಮುಗಿದ ನಂತರ ಕಾಲೇಜಿನಲ್ಲೇ ಸ್ಮೃತಿತಪ್ಪಿ ಕೆಳಕ್ಕೆ ಬಿದ್ದಿದ್ದಾಳೆ ಎನ್ನಲಾಗಿದೆ.

 

ನಮಿತಾ ಮೈಸೂರಿನ ಟಿ.ನರಸೀಪುರ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಇದೇ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾನ್ಸ್ ಮಾಡಿದ ಬಳಿಕ ಪ್ರಜ್ಞೆ ತಪ್ಪಿ ಬಿದ್ದ ನಮಿತಾಳನ್ನು(16) ಕಾಲೇಜು ಸಿಬ್ಬಂದಿ ಅಸ್ಪತ್ರೆಗೆ ಒಯ್ದರು ಕೂಡ ಮಾರ್ಗ ಮಧ್ಯೆ ನಮಿತಾಳ ಪ್ರಾಣ ಪಕ್ಷಿ ಹಾರಿ ಹೋಗಿದ್ದು, ಹೀಗಾಗಿ, ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ . ಸದ್ಯ, ಈ ಪ್ರಕರಣ ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿದ್ಯಾರ್ಥಿನಿಯ ಸಾವಿಗೆ ಅಸಲಿ ಕಾರಣವೇನು ಎಂಬ ವಿಚಾರ ತನಿಖೆಯ ಬಳಿಕವಷ್ಟೇ ಹೊರ ಬೀಳಬೇಕಾಗಿದೆ.

Leave A Reply