SSLC Preparatory Exam 2023 : ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

SSLC Preparatory Exam : ಎಸೆಸೆಲ್ಸಿ (SSLC) ವಿದ್ಯಾರ್ಥಿಗಳು ಗಮನಿಸಬೇಕಾದ ಮುಖ್ಯವಾದ ಮಾಹಿತಿ ಇದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ  2023ರ ಮಾರ್ಚ್‌ ತಿಂಗಳಿನಲ್ಲಿ ಎಸ್ಎಸ್‌ಎಲ್‌ಸಿ (SSLC) ಮುಖ್ಯ ಪರೀಕ್ಷೆಗಳು ನಡೆಯಲಿವೆ. ಇದಕ್ಕೂ ಮೊದಲು ನಡೆಸುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (Karnataka School Examination and Assessment Board) 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

 

2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಈ ಮೊದಲು ಫೆಬ್ರವರಿ 23 ರಿಂದ ಪೂರ್ವ ಸಿದ್ಧತಾ ಪರೀಕ್ಷೆಗಳು ಪ್ರಾರಂಭಗೊಂಡು ಮಾರ್ಚ್ 01, 2023 ರಂದು ಮುಕ್ತಾಯವಾಗುವಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದರೆ ಇದೀಗ, ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಸದ್ಯ ಪೂರ್ವ ಸಿದ್ಧತಾ ಪರೀಕ್ಷೆಗಳು ಫೆಬ್ರವರಿ 27ರಿಂದ ಆರಂಭವಾಗಲಿದ್ದು, ಮಾರ್ಚ್ 04, 2023ರಂದು ಕೊನೆಗೊಳ್ಳಲಿದೆ.

 

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಸಲುವಾಗಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಂತದಲ್ಲಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ರವಾನೆ ಮಾಡಲು ಜೊತೆಗೆ ಕೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಮುದ್ರಿಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಲು ಸರ್ಕಾರ ಮಂಜೂರಾತಿ ನೀಡಿ ಆದೇಶ ಹೊರಡಿಸಲಾಗಿದೆ.

 

ಮಂಡಳಿಯು ಪ್ರಶ್ನೆ ಪತ್ರಿಕೆಗಳನ್ನು ರೂಪಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಲಾಗಿನ್‌ಗೆ  ( Login) ಅಪ್‌ಲೋಡ್‌ (Upload) ಮಾಡಿದ ನಂತರ ಬಿಇಒಗಳು ಪ್ರಶ್ನೆ ಪತ್ರಿಕೆಯನ್ನು ಮುದ್ರಿಸಿ ತಾಲೂಕು ಹಂತದ ಸ್ಟ್ರಾಂಗ್ ರೂಮ್‌ನಲ್ಲಿ ಭದ್ರವಾಗಿಡಬೇಕಾಗುತ್ತದೆ. ಆಯಾ ವಿಷಯದ ಪರೀಕ್ಷೆಯ ದಿನದಂದು ಪ್ರಶ್ನೆ ಪತ್ರಿಕೆಗಳನ್ನು ಶಾಲೆಗಳಿಗೆ ವಿತರಿಸಬೇಕಾಗಿದ್ದು, ಪೂರ್ವ ಸಿದ್ಧತಾ ಪರೀಕ್ಷೆಯನ್ನು ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಗೌಪ್ಯತೆ ಮತ್ತು ಸುಭದ್ರತೆ ಯಿಂದ ನಡೆಸಲು ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರು, ಬಿಇಒಗಳೊಗೆ ಅನುಮತಿ ನೀಡಲಾಗಿದೆ.

 

2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಹೀಗಿವೆ: 

27-02-2023- ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ .

28-02-2023 – ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ

01-03-2023- ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ

02-03-2023- ಗಣಿತ (Mathematics)

03-03-2023 – ವಿಜ್ಞಾನ (Science)

04-03-2023 – ಸಮಾಜ ವಿಜ್ಞಾನ (Social Science)

 

ಎಸೆಸೆಲ್ಸಿ (SSLC) ವಿದ್ಯಾರ್ಥಿಗಳು ಪರೀಕ್ಷೆಯ ಮೊದಲ ಪೂರ್ವ ತಯಾರಿ ನಡೆಸಿ ಹೆಚ್ಚಿನ ಅಂಕ ಗಳಿಸಬಹುದಾಗಿದ್ದು, ಹಿಂದಿನ ಪ್ರಶ್ನೆ ಪತ್ರಿಕೆಗಳನ್ನು ಓದಿ ತಯಾರಿ ನಡೆಸಿದರೆ ಎಸೆಸೆಲ್ಸಿ ಮುಖ್ಯ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆಯಲು ಸಾಧ್ಯವಾಗುತ್ತದೆ. ನಿಮ್ಮ ಭವಿಷ್ಯ ರೂಪಿಸಿಕೊಳ್ಳಲು ಇಲ್ಲಿನ ಅಂಕಗಳು ಹೆಚ್ಚು ಮಹತ್ವ ಪಡೆದುಕೊಳ್ಳುತ್ತದೆ.ಹೀಗಾಗಿ, ಟೈಮ್ ಟೇಬಲ್ ತಯಾರಿಸಿ ಓದಲು ಆರಂಭಿಸಿ ಉತ್ತಮ ಅಂಕಗಳಿಸಿ ನಿಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದು.

Leave A Reply

Your email address will not be published.