Home Education Free Bus Pass : ಎಪ್ರಿಲ್‌ 1 ರಿಂದ ದುಡಿಯೋ ಹೆಣ್ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ...

Free Bus Pass : ಎಪ್ರಿಲ್‌ 1 ರಿಂದ ದುಡಿಯೋ ಹೆಣ್ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌ !

Hindu neighbor gifts plot of land

Hindu neighbour gifts land to Muslim journalist

Free Bus Pass : ವಿದ್ಯಾರ್ಥಿನಿಯರಿಗೆ (student)ಮಾನ್ಯ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ CM Basavaraj bommayi )ಅವರು ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಹೌದು ರಾಜ್ಯ(state )ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು “ಅಂಬಾರಿ ಉತ್ಸವ” ಎಂಬ ಹೆಸರಲ್ಲಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಮಹಿಳೆಯರಿಗೆ (women )ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಭಿಯಾಗಲು ಹೊಸ ಯೋಜನೆ ಒಂದನ್ನು ರೂಪಿಸಲಾಗಿದ್ದು, ರಾಜ್ಯದಲ್ಲಿ ಏಪ್ರಿಲ್(April )1 ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ, ಉಚಿತ ಬಸ್ ಪಾಸ್ (free bus pass)ವ್ಯವಸ್ಥೆ ಕಲ್ಪಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಈ ಬಸ್ಸಿನಲ್ಲಿ ಸ್ಲೀಪರ್ ವ್ಯವಸ್ಥೆ ಇದೆ‌. ದೂರ ಪ್ರಯಾಣಕ್ಕೆ ಅಗತ್ಯವಿರುವ ರೈಲ್ವೆ ಮಾದರಿಯಲ್ಲಿವುದಕ್ಕಿಂತ ಉತ್ತಮವಾದ ವ್ಯವಸ್ಥೆ ಕಲ್ಪಿಸಲಾಗಿದೆ. ಹಿಂದೆ ವೊಲ್ವೊ ಬಸ್ ಗಳು ಹೆಚ್ಚು ಅನುಕೂಲಕರವಾಗಿರಲಿಲ್ಲ. ಹಿಂದಿನ ಸಮಸ್ಯೆಗಳನ್ನು ಅರಿತು ಈ ಬಸ್ ಗಳಲ್ಲಿ ಮಲ್ಟಿ ಎಕ್ಸೆಲ್ ವ್ಯವಸ್ಥೆ ಕಲ್ಪಿಸಿ, ಉತ್ತಮ ವ್ಯವಸ್ಥೆ ರೂಪಿಸಲಾಗಿದೆ. ಸುಲಭವಾಗಿ, ಸುಖವಾಗಿ ರಾತ್ರಿ ಪ್ರಯಾಣ ಮಾಡಬಹುದಾಗಿದೆ. ಇದರ ರಾಜ್ಯ ಸಾರಿಗೆಗೆ ಇನ್ನಷ್ಟು ಬಸ್ಸುಗಳನ್ನು ಪಡೆದುಕೊಳ್ಳುವುದು ಸೂಕ್ತ ಎಂದು ಪ್ರೋತ್ಸಾಹದ ಜೊತೆಗೆ ಸಲಹೆ ನೀಡಿದರು.

ಸದ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವೋಲ್ಲೋ ಬಿಎಸ್-VI 9600s ಮಾದರಿಯ ಮಲ್ಟಿ ಆಕ್ಸಲ್ ಫೀಪರ್ ವಾಹನಗಳಿಗೆ ಸ್ಪರ್ಧೆಯ ಮೂಲಕ ಸಾರ್ವಜನಿಕರಿಂದ ಸ್ವೀಕರಿಸಿದ ಹೆಸರುಗಳ ಮೂಲಕ “ಅಂಬಾರಿ ಉತ್ಸವ” ಎಂಬ ಬ್ಯಾಂಡ್ ಹೆಸರು ಮತ್ತು “ಸಂಭ್ರಮದ ಪ್ರಯಾಣ” ಎಂಬ ಟ್ಯಾಗ್ ಲೈನ್ ನೀಡಿದೆ. ಈ “ಅಂಬಾರಿ ಉತ್ಸವ” ವಾಹನಗಳನ್ನು ಕೆಳಕಂಡ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ.
ಬೆಂಗಳೂರು – ಸಿಕಂದ್ರಬಾದ್ ಬೆಂಗಳೂರು – ಹೈದ್ರಾಬಾದ್
ಬೆಂಗಳೂರು – ಎರ್ನಾಕುಲಂ
ಬೆಂಗಳೂರು – ತಿರುವನಂತಪುರಂ ಬೆಂಗಳೂರು – ತ್ರಿಚೂರು
ಬೆಂಗಳೂರು – ಪಣಜಿ
ಕುಂದಾಪುರ – ಬೆಂಗಳೂರು
ಮಂಗಳೂರು – ಪೂನಾ

ಜೊತೆಗೆ ಈ ಬಾರಿಯ ಬಜೆಟ್‌ನಲ್ಲಿ ವಿದ್ಯಾರ್ಥಿನಿಯರಿಗೆ ಹಾಗೂ ದುಡಿಯುವ ಹೆಣ್ಣುಮಕ್ಕಳಿಗೆ ಉಚಿತ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದು, ಸರ್ಕಾರ ನೌಕರ ವರ್ಗ ಹಾಗೂ ಆಡಳಿತ ಮಂಡಳಿ ಜೊತೆಗಿರುತ್ತದೆ ಎಂದಿದ್ದಾರೆ.

ಇನ್ನು ಶಾಲೆ ಆರಂಭವಾಗುವ ಸಂದರ್ಭದಲ್ಲಿ ಪ್ರತಿ ತಾಲೂಕಿನಲ್ಲಿ ಕನಿಷ್ಟ ಐದು ಬಸ್ ಸಂಚಾರ ಆರಂಭ ಮಾಡಬೇಕು. ಅಗತ್ಯ ಬಿದ್ದರೆ ಇನ್ನಷ್ಟು ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಈ ಸಮಯದಲ್ಲಿ ಸಿಬ್ಬಂದಿಯ ವೇತನ ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದು, ಹಣಕಾಸಿನ ಇತಿಮಿತಿಯಲ್ಲಿ ನೌಕರರೊಂದಿಗೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ತಂತ್ರಜ್ಞಾನ ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ಪ್ರಯಾಣಿಕರ ಆಯ್ಕೆಗಳು ಬದಲಾಗುತ್ತಿದೆ. ಇದನ್ನು ಗಮನಿಸಿ, ಖಾಸಗಿ ವ್ಯವಸ್ಥೆಗಿಂತ ಸರ್ಕಾರಿ ವ್ಯವಸ್ಥೆಗಳನ್ನು ಜನರು ಹೆಚ್ಚು ಬಳಸಬೇಕು ಎಂದು ಜನರಿಗೆ ಹುರುಪು ತುಂಬಿದರು.

ಮಾನ್ಯ ಮುಖ್ಯಮಂತ್ರಿಗಳ ಪ್ರಕಾರ ಆರ್ಥಿಕ ಬೆಳವಣಿಗೆಯಲ್ಲಿ ಸಂಚಾರ ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೆ ಸರ್ಕಾರ ಆದ್ಯತೆ ನೀಡಿದೆ.
ಅಗತ್ಯ ಬಿದ್ದರೆ ಸಂಚಾರದ ಹೊಸ ಪಡೆಗೆ ಇನ್ನಷ್ಟು ಅನುದಾನ ನೀಡಲಾಗುವುದು ಎಂದು ಜನರಿಗೆ ಭರವಸೆ ನೀಡಿದ್ದಾರೆ.