Second PUC : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಇರಲಿದೆ ಮಹತ್ವದ ಬದಲಾವಣೆ !

Second Puc Exam 2023: ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ವಾರ್ಷಿಕ ಪರೀಕ್ಷೆ ಬರೆಯಲು ಸಜ್ಜಾದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಮಹತ್ವದ ಮಾಹಿತಿ ನೀಡಿದ್ದು, ಮಾರ್ಚ್ 9 ರಿಂದ 29 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು(second puc annual exam) ನಡೆಯಲಿದೆ. ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಇದರಲ್ಲಿ 3 ಹಂತದ ಪ್ರಶ್ನೆಗಳು ಇರಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ (B. C. Nagesh) ಹೇಳಿದ್ದಾರೆ.

ಅಲ್ಲದೆ, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೆ (Second Puc Exam 2023) ,  ಒಟ್ಟು 1109 ಪರೀಕ್ಷಾ ಕೇಂದ್ರಗಳು ಇದ್ದು, ಪರೀಕ್ಷೆಯಲ್ಲಿ ಒಟ್ಟು 5716 ಕಾಲೇಜುಗಳು ಭಾಗಿಯಾಗಲಿದ್ದು, 7,27,387 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಪರೀಕ್ಷಾ ವೇಳೆ ವಿದ್ಯಾರ್ಥಿಗಳು ಪಾಲನೆ ಮಾಡಬೇಕಾದ ನಿಯಮಗಳು:
• ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಯಾವುದೇ ರೀತಿಯ ಎಲೆಕ್ಟ್ರಾನಿಕ್ ಗ್ಯಾಜೆಟ್​ಗಳನ್ನು ತೆಗೆದುಕೊಂಡು ಹೊಗಲು ಅವಕಾಶ ಇರುವುದಿಲ್ಲ.
• ಪರೀಕ್ಷೆ ಆರಂಭವಾಗುವ 15 ನಿಮಿಷಕ್ಕಿಂತ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಹಾಜರಿರಬೇಕು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ :

09-03-2023 – ಗುರುವಾರ – ಕನ್ನಡ, ಅರೇಬಿಕ್
11-03-2023 – ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
13-03-2023 – ಸೋಮವಾರ – ಅರ್ಥಶಾಸ್ತ್ರ
14-03-2023 -ಮಂಗಳವಾರ- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
15-03-2023 – ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
16-03-2023 – ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
17-03-2023 – ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ 18-03-2023 – ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
20-03-2023 – ಸೋಮವಾರ – ಇತಿಹಾಸ, ಭೌತಶಾಸ್ತ್ರ
21-03-2023 – ಮಂಗಳವಾರ – ಹಿಂದಿ
23-03-2023 – ಗುರುವಾರ – ಇಂಗ್ಲೀಷ್
25-03-2023 – ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27-03-2023 – ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
29-03-2023 – ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

Leave A Reply

Your email address will not be published.