Rohini Sindhuri: ರೂಪ ವಿರುದ್ಧ ರೊಚ್ಚಿಗೆದ್ದ ರೋಹಿಣಿ! 24 ಗಂಟೆಯೊಳಗೆ ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್!

Rohini Sindhuri vs Roopa: ಐಎಎಸ್‌ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ರೂಪಾ  ಜಟಾಪಟಿ (Rohini Sindhuri vs Roopa) ಮುಗಿಯುವ ಮುನ್ನವೇ, ವಿವಾದ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಮೈಸೂರಿನ (Mysuru) ಆರ್ ಟಿಐ ಕಾರ್ಯಕರ್ತ ಗಂಗರಾಜುರ (Activist Gangaraju) ಜೊತೆ ರೂಪಾ ಮಾತಾಡಿರುವ ಆಡಿಯೋ ಹೊರ ಬಂದಿದ್ದು, ಹೊಸ ಟ್ವಿಸ್ಟ್ ಸಿಕ್ಕಿದೆ. ಇದರ ನಡುವೆಯೇ ಇಂದು ಐಜಿಪಿ ಡಿ. ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡುವಂತೆ ರೋಹಿಣಿ ಸಿಂಧೂರಿ ಸಿಟಿ ಸಿವಿಲ್ ಕೋರ್ಟ್‌ನಲ್ಲಿ (City Civil Court ) ಅರ್ಜಿ ಹಾಕಿದ್ದಾರೆ.

ಅರ್ಜಿ ಪರ ವಕೀಲರ ವಾದ ಆಲಿಸಿರುವ ಕೋರ್ಟ್ (Court)​ ನಾಳೆಗೆ ಆದೇಶವನ್ನ ಕಾಯ್ದಿರಿಸಿದೆ. ಇದರ ನಡುವೆ ರೋಹಿಣಿ ಸಿಂಧೂರಿ, ಡಿ ರೂಪಾ ಅವರಿಗೆ ತಮ್ಮ ವಕೀಲರ ಮೂಲಕ ಲೀಗಲ್ ನೋಟಿಸ್ ಜಾರಿ ಮಾಡಿದ್ದು, ಒಟ್ಟು 21 ಅಂಶಗಳನ್ನ ಮುಂದಿಟ್ಟು ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ. ರೂಪಾ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಹಿಂದೆ ಸೈಬರ್ ಸೆಲ್‍ನ ಮುಖ್ಯಸ್ಥರು ಆಗಿದ್ದರು. ಆ ಸಂದರ್ಭದಲ್ಲಿ ರೋಹಿಣಿಯವರ ಫೋಟೋ ಕಳವು ಮಾಡಿರಬಹುದು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಪರ ವಕೀಲರು ವಾದ ಮಂಡಿಸಿದ್ದಾರೆ.

ಅಲ್ಲದೆ ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರೂಪಾಗೆ ಹಿರಿಯ ವಕೀಲರ ಮೂಲಕ ನೋಟಿಸ್ ನೀಡಲಾಗಿದೆ. 24 ಗಂಟೆಯ ಒಳಗಡೆ ಲಿಖಿತ ರೂಪದಲ್ಲಿ ಕ್ಷಮೆ ಕೇಳಬೇಕು. ಸಾಮಾಜಿಕ ಜಾಲತಾಣ(Social Media) ದಲ್ಲಿ ತನ್ನ ವಿರುದ್ಧ ಮಾಡಿರುವ ಮಾನಹಾನಿ ಆರೋಪಗಳನ್ನು ಡಿಲೀಟ್ ಮಾಡಬೇಕು. ಇಲ್ಲದಿದ್ದರೆ ಕೋರ್ಟ್‍ನಲ್ಲಿ 1 ಕೋಟಿ ರೂ. ಮಾನನಷ್ಟ ಕೇಸ್ ಹೂಡುವುದಾಗಿ ರೋಹಿಣಿ ಸಿಂಧೂರಿ ಎಚ್ಚರಿಕೆ ನೀಡಿದ್ದಾರೆ

ಈಗಾಗಲೇ ಸರ್ಕಾರ ಇವರಿಬ್ಬರಿಗೂ ವರ್ಗಾವಣೆ ಶಿಕ್ಷೆ ನೀಡಿದರೂ ಇವರಿಬ್ಬರ ವಾರ್ ಮಾತ್ರ ನಿಂತಿರಲಿಲ್ಲ. ರೋಹಿಣಿ ವಿರುದ್ಧ ಸ್ಫೋಟಕ ಆರೋಪ ಮಾಡಿರುವ ರೂಪಾ ಆಡಿಯೋ ವೈರಲ್ ಆಗಿತ್ತು. RTI ಕಾರ್ಯಕರ್ತ ಗಂಗರಾಜು ಜೊತೆ ಡಿ.ರೂಪಾ ಮಾತನಾಡುವ ವೇಳೆ ಸಿಂಧೂರಿ ವಿರುದ್ಧ ಅವಾಚ್ಯ ಶಬ್ದ ಬಳಸಿರುವುದು ಆಡಿಯೋದಲ್ಲಿ ಕೇಳಿ ಬಂದಿತ್ತು. ಅಲ್ಲದೆ ಸಿಂಧೂರಿ ಆದಾಯದ ಬಗ್ಗೆಯೂ ಗಂಗಾರಾಜು ಜೊತೆ ಡಿ ರೂಪಾ ಮಾತಾಡಿದ್ದರು. ಜಾಲಹಳ್ಳಿಯಲ್ಲಿ ಸಿಂಧೂರಿ ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ. ಈ ಬಗ್ಗೆಯೂ ನನ್ನ ಗಂಡನ ಜೊತೆ ಚಾಟ್ ಮಾಡುತ್ತಾಳೆ ಅಂತಾ ರೋಹಿಣಿ ವಿರುದ್ಧ ಕಿಡಿಕಾರಿದ್ದರು.

ಆಡಿಯೋ ವೈರಲ್​ ಆಗುತ್ತಿದ್ದಂತೆ ಮತ್ತೆ ಪೋಸ್ಟ್ ಮಾಡಿದ್ದ ಡಿ ರೂಪಾ ಅವರು, ಭ್ರಷ್ಟಾಚಾರದ ಬಗ್ಗೆ ಫೋಕಸ್​ ಮಾಡಿ, ನಾನು ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುವವರನ್ನ ತಡೆದಿಲ್ಲ. ಒಬ್ಬ ಐಎಎಸ್‌ ಅಧಿಕಾರಿ ಕರ್ನಾಟಕದಲ್ಲಿ ಮೃತಪಟ್ಟಿದ್ದರು. ಅದೇ ರೀತಿ ತಮಿಳುನಾಡಿನಲ್ಲಿ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದರು. ಐಎಎಸ್‌ ದಂಪತಿ ವಿಚ್ಚೇದನ ಪಡೆದಿದ್ದಾರೆ. ಆದರೆ ನಾನು ನನ್ನ ಗಂಡ ಇನ್ನೂ ಒಟ್ಟಿಗೆ ಇದ್ದೇವೆ. ಕುಟುಂಬಕ್ಕೆ ಅಡ್ಡಿಯಾಗುತ್ತಿರುವವರನ್ನ ಪ್ರಶ್ನಿಸಿ, ಇಲ್ಲವಾದರೆ ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಧೈರ್ಯವಾದ ಮಹಿಳೆ, ನಾನು ಹೋರಾಡುತ್ತೇನೆ ಎಂದಿದ್ದರು.

Leave A Reply

Your email address will not be published.