Vidyanidhi Yojana: ಕೃಷಿ ಕಾರ್ಮಿಕ ಮಕ್ಕಳಿಗೆ ಗುಡ್ ನ್ಯೂಸ್!

Share the Article

Vidyanidhi yojana : ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ಇಲ್ಲಿದೆ. ಸರ್ಕಾರದ ಹಲವು ಯೋಜನೆಗಳಲ್ಲಿ ಒಂದಾದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ(Raita vidyanidhi yojana) ಯ ಅಡಿಯಲ್ಲಿ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಇದೀಗ ಈ ವೇತನ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆನ್‍ಲೈನ್(online) ಮೂಲಕ ಅರ್ಜಿ ಸಲ್ಲಿಸಿ, ಇದರ ಪ್ರಯೋಜನ ಪಡೆಯಿರಿ ಎಂದು ಜಂಟಿಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ರೈತ(farmers) ಕುಟುಂಬದ ಮಕ್ಕಳಿಗೆ ಈ ಯೋಜನೆಯಡಿ ಕೃಷಿ ಇಲಾಖೆಯಿಂದ 2500 ರೂ. ಗಳಿಂದ 11000 ರೂ. ಗಳವರೆಗೆ ವಾರ್ಷಿಕ ವಿದ್ಯಾರ್ಥಿವೇತನವನ್ನು, ಅರ್ಹ ಮಕ್ಕಳ ಬ್ಯಾಂಕ್‍ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಪದ್ದತಿಯಲ್ಲಿ ಜಮೆ ಮಾಡಲಾಗುತ್ತಿದೆ. ಇದೀಗ ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ.

ಯಾರೆಲ್ಲಾ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯ ಪ್ರಯೋಜನ ಪಡೆಯಬಹುದು?

• ಭೂರಹಿತ ಕೃಷಿ ಕಾರ್ಮಿಕರ ಮಕ್ಕಳು ಈ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು FID without land ಹಾಗೂ ನರೇಗಾ ಗುರುತಿನ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.
• ಹಾಗೂ 8 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿನಿಯರಿಗೆ ಮಾತ್ರ ವಾರ್ಷಿಕ 2000 ರೂ. ವಾರ್ಷಿಕ ವಿದ್ಯಾರ್ಥಿ ವೇತನ(scholarship) ನೀಡಲಾಗುತ್ತದೆ.
• ಪಿಯುಸಿ, ಐಟಿಐ, ಡಿಪ್ಲೋಮಾ(diploma) ಮುಂತಾದ ಪದವಿಗೂ ಮುನ್ನ ಪಡೆಯುವ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ರೂ. 2500 ಹಾಗೂ ವಿದ್ಯಾರ್ಥಿನಿಯರಿಗೆ ರೂ. 3000. ಲಭಿಸುತ್ತದೆ.
• ಎಲ್.ಎಲ್.ಬಿ, ಪ್ಯಾರಾಮೆಡಿಕಲ್, ಬಿ.ಫಾರ್ಮ್, ನರ್ಸರಿ ಮುಂತಾದ ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ರೂ. 7500, ವಿದ್ಯಾರ್ಥಿನಿಯರಿಗೆ ರೂ. 8000.
• ಬಿಎ, ಬಿಎಸ್‍ಸಿ, ಬಿಕಾಂ ಮುಂತಾದ ಪದವಿ ವ್ಯಾಸಂಗ ಮಾಡುವ (ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ವೃತ್ತಿಪರ ಕೋರ್ಸ್‍ಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳಿಗೆ ರೂ. 5000, ವಿದ್ಯಾರ್ಥಿನಿಯರಿಗೆ ರೂ. 5500. ಸಿಗುತ್ತದೆ.
• ಎಂ.ಬಿ.ಬಿ.ಎಸ್ / ಬಿ.ಇ / ಬಿ.ಟೆಕ್ ಮತ್ತುಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ರೂ. 10,000, ವಿದ್ಯಾರ್ಥಿನಿಯರಿಗೆ ರೂ. 11,000 ಗಳ ವಾರ್ಷಿಕ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
• ಆದರೆ ಈ ಯೋಜನೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಸಂಬಂಧಪಟ್ಟ ಪ್ರೌಢಶಿಕ್ಷಣ ವಿದ್ಯಾರ್ಥಿನಿಯರು, ಪದವಿ ಪೂರ್ವ, ಡಿಪ್ಲೋಮಾ, ಪದವಿ, ಇತ್ಯಾದಿ ವೃತ್ತಿಪರ ಕೋರ್ಸ್‍ಗಳು ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಸ್ಟೂಡೆಂಟ್ಸ್ ಸ್ಕಾಲರ್‍ಶಿಪ್ ಪೋರ್ಟಲ್ ಜಾಲತಾಣದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಿ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು : https://ssp.karnataka.gov.in/ssp2223/homeNew.aspx ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು : https://ssp.postmatric.karnataka.gov.in/homepage.aspx

Leave A Reply