2023ರ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಕ್ರಿಕೆಟ್ ಪಂದ್ಯಾವಳಿಗೆ ನಿರ್ಬಂಧ ವಿಧಿಸಿದ ಪೊಲೀಸ್ ವರಿಷ್ಠಾಧಿಕಾರಿ

Share the Article

Cricket tournament : ಬೆಂಗಳೂರು (ಗ್ರಾ.) : 2023ರ ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಕ್ರಿಕೆಟ್ ಪಂದ್ಯಾವಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶಿಸಿದ್ದಾರೆ.

ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಫೆ.17ರಂದು ರಾಜಕೀಯ ಮುಖಂಡರೊಬ್ಬರು ಕ್ರಿಕೆಟ್‌ ಪಂದ್ಯಾವಳಿ ಆಯೋಜನೆ ಮಾಡಿದ್ದರು.

ಈ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಭರತ್‌ ಮತ್ತು ಪ್ರತೀಕ್‌ ಎಂಬ ಇಬ್ಬರು ಅಮಾಯಕ ಯುವಕರ ಕೊಲೆಗೆ ಕಾರಣವಾಗಿತ್ತು.

ಈ ಹಿನ್ನೆಲೆ ರಾಜಕೀಯ ಪ್ರೇರಿತ ಕ್ರಿಕೆಟ್‌ ಟೂರ್ನಿಗಳನ್ನು (Cricket tournament) ನಿರ್ಬಂಧಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆ ಮುಗಿ ಯುವವರೆಗೂ ರಾಜಕೀಯ ಪ್ರೇರಿತ ಕ್ರಿಕೆಟ್‌ ಟೂರ್ನಿಮೆಂಟ್‌ಗಳನ್ನು ನಡೆಸದಂತೆ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕು.

ಕ್ರಿಕೆಟ್‌ ಪಂದ್ಯಾವಳಿ ಆಯೋಜನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.

Leave A Reply