7th Pay Commission : ಸಿಎಂ ಬೊಮ್ಮಾಯಿ ನೀಡಿದ್ರು ಸರಕಾರಿ ನೌಕರರಿಗೆ ಗುಡ್ ನ್ಯೂಸ್!

7th Pay Commission: ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ, ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಶುಭ ಸುದ್ದಿ(Good News) ನೀಡಿದ್ದಾರೆ. ಮಧ್ಯಂತರ ವರದಿಯನ್ನ ಗಮನಿಸಿ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ(7th Pay Commission:)  ಅನುಷ್ಠಾನ ಮಾಡುವ ಕುರಿತು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ರೈತ ವಿದ್ಯಾನಿಧಿ , ಸ್ತ್ರೀ ಸಾಮರ್ಥ್ಯ ಯೋಜನೆ, ಸಂಜೀವಿನಿ ಯೋಜನೆ, ವಿವೇಕಾನಂದ ಯೋಜನೆ, ಎಸ್ಸಿ ಎಸ್ಟಿ ಸಮುದಾಯ ಯೋಜನೆಗಳು ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಅವರ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಪ್ರತಿ ಕ್ಷೇತ್ರದ ಜನತೆಯ ಏಳಿಗೆಯನ್ನು ಗಮನದಲ್ಲಿರಿಸಿ ಯೋಜನೆ ರೂಪಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚುಟಿ, ಹೆಣ್ಣುಮಕ್ಕಳಿಗೆ ಪದವಿ ವರೆಗೆ ಉಚಿತ ಶಿಕ್ಷಣ, ಉಚಿತ ಬಸ್ ಪಾಸ್(FreeBus Pass) ನೀಡುತ್ತಿರುವ ಕುರಿತು ಸಿಎಂ ಮಾಹಿತಿ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ನಲ್ಲಿ ಅನೇಕ ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ ವರ್ಷ 1 ಲಕ್ಷ ಜನ ಸರ್ಕಾರಿ ನೌಕರರ ಹುದ್ದೆ ಭರ್ತಿ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಣಕಾಸು ಲಭ್ಯತೆಯಾನುಸಾರ ಪರಿಷತ್ ಸದಸ್ಯರ ಅನುದಾನ ಹೆಚ್ಚಳದ ಕುರಿತು ಗಮನ ಹರಿಸಲಾಗುತ್ತದೆ. ಮೊದಲ ಬಾರಿಗೆ ಅಧಿಕಾರದ ವಿಕೇಂದ್ರೀಕರಣದ ಜೊತೆಗೆ ಹಣಕಾಸಿನ ವಿಕೇಂದ್ರೀಕರಣ ಮಾಡಲಾಗುತ್ತಿದೆ. ಅವಶ್ಯಕ ಸೇವೆಗಳನ್ನು ನೋಡಿಕೊಂಡು ಶಿಕ್ಷಕರ, ಉಪನ್ಯಾಸ ಹುದ್ದೆಗಳ(Teaching Staff) ಭರ್ತಿ ಮಾಡುವ ಕ್ರಮ ಕೈಗೆತ್ತಿ ಕೊಳ್ಳಲಾಗುತ್ತದೆ. ಇದೇ ವೇಳೆ, ಸಿಎಂ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ರಚನೆ (7th Pay Commission) ಕುರಿತು ಮಧ್ಯಂತರ ವರದಿ ತರಿಸಿಕೊಂಡು ಅನುಷ್ಠಾನ ಮಾಡುವ ಭರವಸೆ ನೀಡಿದ್ದಾರೆ.

ಈ ಬಾರಿ 3,09,182 ಕೋಟಿ ರೂ ಬಜೆಟ್( Budget) ಮಂಡಿಸಿದ್ದು, 72 ಸಾವಿರ ಕೋಟಿ ಸಾಲಕ್ಕೆ ಅನುಮತಿ ಪಡೆದು 68 ಸಾವಿರ ಕೋಟಿ ಮಾತ್ರ ಸಾಲ ಮಾಡಿದ್ದೇವೆ. ರಾಜ್ಯದ ಸಾಲ ಜಿಎಸ್ಡಿಪಿ ಮೇಲೆ ಹೆಚ್ಚು ಅವಲಂಬಿತ ವಾಗಿರುತ್ತದೆ. ಸಾಲ(Loan) ಪಡೆಯುವ, ತೀರಿಸುವ ಮಿತಿ ಕೂಡ ಇಲ್ಲಿ ಪ್ರಭಾವ ಬೀರುತ್ತದೆ. ಸಾಲ ಯಾವ ಕಾರಣಕ್ಕೆ ಬಳಕೆ ಮಾಡುತ್ತೇವೆ ಎನ್ನುವ ವಿಚಾರ ಹೆಚ್ಚು ಮುಖ್ಯ ಪಾತ್ರ ವಹಿಸುತ್ತದೆ. ನಾವು ಮಾಡಿರುವ ಸಾಲವನ್ನು ಬಂಡವಾಳ ವೆಚ್ಚಕ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದ ಹಣಕಾಸು ಸ್ಥಿತಿ ಸರಿಯಾದ ಮಾರ್ಗದಲ್ಲಿ ನಡೆಸಿ ಉಳಿತಾಯ ಬಜೆಟ್ ಮಂಡಿಸಿದ್ದು, ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಬಜೆಟ್ ಗಾತ್ರ ಹೆಚ್ಚಿಸಿ ಉಳಿತಾಯ ಬಜೆಟ್ ಮಂಡಿಸಿರುವ ಬಗ್ಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

Leave A Reply

Your email address will not be published.