KCET 2023 : ಕೆಸಿಇಟಿ ಪರೀಕ್ಷಾ ದಿನಾಂಕ ಪ್ರಕಟಣೆ!

KCET 2023 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2023ರ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷಾ (KCET 2023ರ ) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕೆಸಿಇಟಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಈ ಬಗ್ಗೆ ಮಾಹಿತಿ ತಿಳಿಯುವುದು ಉತ್ತಮ.

ಕೆಸಿಇಟಿ ಪರೀಕ್ಷೆ – 2023 ಆಫ್ಲೈನ್ ಮೂಲಕ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಯಲಿದ್ದು, ಈ ಪರೀಕ್ಷೆಗಳು ಒಟ್ಟು 3 ಗಂಟೆಗಳ ಅವಧಿಯಲ್ಲಿ ಜರುಗಲಿದೆ. 20 ಮತ್ತು 21, 2023 ರಂದು ಕೆಸಿಇಟಿ ಪರೀಕ್ಷೆಗಳು ನಡೆಯಲಿವೆ. ಇದರ ಜೊತೆಗೆ ಮೇ 22, 2023 ರಂದು ಕನ್ನಡ ಭಾಷಾ ಪರೀಕ್ಷೆಯು ಜರುಗಲಿದೆ.

ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ:
ಮೊದಲು, kea.kar.nic.in ನಲ್ಲಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಮೊದಲ ಪುಟದಲ್ಲಿ KCET 2023 ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿಕೊಂಡು ನೋಂದಾಯಿಸಿಕೊಳ್ಳಬೇಕು. ಆ ಬಳಿಕ ವಿವರಗಳ ಮೂಲಕ ಲಾಗಿನ್ ಮಾಡಿಕೊಂಡು ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿಕೊಂಡ ನಂತರ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು. ಭವಿಷ್ಯದ ಉಲ್ಲೇಖಕ್ಕಾಗಿ ದೃಢೀಕರಣ ಪುಟವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಸದ್ಯ, ಕೆಸಿಇಟಿ 2023 ರ ನೋಂದಣಿ ದಿನಾಂಕ ಪ್ರಕಟಿಸಿಲ್ಲ. ನೋಂದಣಿ ಲಿಂಕ್ ಅನ್ನು ಸಕ್ರಿಯಗೊಳಿಸಿದ ಬಳಿಕ ನೋಂದಾಯಿತ ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ನಲ್ಲಿ ಆನ್ಲೈನ್ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Miracle Child: ತನ್ನ ಕರುಳಬಳ್ಳಿಯನ್ನು 20 ಅಡಿ ಆಳದ ಬಾವಿಗೆ ಎಸೆದ ತಾಯಿ

Leave A Reply

Your email address will not be published.