IAF Recruitment 2023: ಭಾರತೀಯ ವಾಯುಪಡೆಯಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ : ಮಾ.31

IAF Recruitment 2023: ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆ(IAF Recruitment 2023)ಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಭಾರತೀಯ ವಾಯುಪಡೆ
ಹುದ್ದೆ : ಅಗ್ನಿವೀರ್​ ವಾಯು
ಉದ್ಯೋಗದ ಸ್ಥಳ : ಭಾರತದಲ್ಲಿ ಎಲ್ಲಿ ಬೇಕಾದರೂ

ವಿದ್ಯಾರ್ಹತೆ:
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಆಟೋಮೊಬೈಲ್/ ಕಂಪ್ಯೂಟರ್ ಸೈನ್ಸ್​/ ಐಟಿ/ ಇನ್​​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್​ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 21 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 30,000-40,000 ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪಾವತಿಸುವ ಬಗೆ- ಆನ್​ಲೈನ್​

ಆಯ್ಕೆ ಪ್ರಕ್ರಿಯೆ:
ದೈಹಿಕ ಸಾಮರ್ಥ್ಯ ಪರೀಕ್ಷೆ
ಹೊಂದಿಕೊಳ್ಳುವಿಕೆ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಆನ್‌ಲೈನ್ ಪರೀಕ್ಷೆ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 31, 2023
ಆನ್​ಲೈನ್ ಪರೀಕ್ಷೆ ನಡೆಯುವ ದಿನಾಂಕ: ಮೇ 20, 2023

Leave A Reply

Your email address will not be published.