Home News ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಸರ್ಕಾರ ಅಧಿಕೃತ ಆದೇಶ: ಏಪ್ರಿಲ್ 1 ರಿಂದ ಜಾರಿ

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳಕ್ಕೆ ಸರ್ಕಾರ ಅಧಿಕೃತ ಆದೇಶ: ಏಪ್ರಿಲ್ 1 ರಿಂದ ಜಾರಿ

Hindu neighbor gifts plot of land

Hindu neighbour gifts land to Muslim journalist

7th Pay Commission : ಕರ್ನಾಟಕ ಸರ್ಕಾರಿ ನೌಕರರ ವೇತನವನ್ನು 17 ಶೇ. ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬರುವ ಏಪ್ರಿಲ್ 1 ರಿಂದ ಈ ನೂತನ ಆದೇಶ ಜಾರಿಯಾಗಲಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ. ಇದರ ಅನ್ವಯ ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆ, ವಿವಿ ಬೋಧಕೇತರ ಸಿಬ್ಬಂದಿ, ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡಲಾಗಿದೆ.

ಈಗಿನ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಯ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. 1ನೇ ಏಪ್ರಿಲ್ 2023 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಆಗಲಿದೆ. ಬರುವ ಏಪ್ರಿಲ್‌ 1 ರಿಂದ ಜಾರಿಗೆ ಬರುವಂತೆ ಸರ್ಕಾರ ಈ ಅಧಿಕೃತ ಆದೇಶ ಹೊರಡಿಸಿದೆ.
ಮೂಲವೇತನದಲ್ಲಿ ಈ ಕೆಳಗಿನ ಅಂಶಗಳು ಬಲಿದೆ. ವೈಯಕ್ತಿಕ ವೇತನಡಾ ಜತೆಗೆ ಸ್ಥಗಿತ ವೇತನ ಬಡ್ತಿ, ಜೊತೆಗೆ ಹೆಚ್ಚುವರಿ ವೇತನ ಬಡ್ತಿ ಕೂಡಾ ಇದರಲ್ಲಿ ಸೇರಿರುತ್ತದೆ. ಸರ್ಕಾರದ ಆದೇಶದಿಂದ ಮೂಲವೇತನದ ಶೇ.17ರಷ್ಟು ಮಧ್ಯಂತರ ಪರಿಹಾರ ಮಂಜೂರು ಮಾಡಲು ತೀರ್ಮಾನಿಸಲಾಗಿದೆ.

ಈಗಿನ ಅದೇಶದಲ್ಲೇನಿದೆ?
ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ, 2018 ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ಹರ್ಷಿಸುತ್ತದೆ ಎಂದಿದೆ ಬೊಮ್ಮಾಯಿ ಸರ್ಕಾರ.

ಮೂಲ ವೇತನ ಎಂದರೆ ಸರ್ಕಾರಿ ನೌಕರನು ಹೊಂದಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ. ಮತ್ತು ಅದರಲ್ಲಿ ಆಯಾ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಅದು ಸ್ಥಗಿತ ವೇತನ ಬಡ್ತಿ ಆಗುತ್ತದೆ. ಆ- 2018 ರ ಕರ್ನಾಟಕ ನಾಗರೀಕ ಸೇವಾ ( ಪರಿಷ್ಕೃತ ವೇತನ) ನಿಯಮಗಳ ನಿಯಮ 3 (ಸಿ) ಯನ್ನು ಓದಿಕೊಂಡು 7 ನೇ ನಿಯಮದ (3) ನೇ ಉಪ ನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ ಆ ವೈಯಕ್ತಿಕ ವೇತನ ಇ- ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ ಅವುಗಳು ಸೇರುತ್ತವೆ ಎಂದು ಉಲ್ಲೇಖದಲ್ಲಿ ಹೇಳಿದೆ.

ಈ ನಡುವೆ ರಾಜ್ಯ ಸರ್ಕಾರ ಎರಡು ಆದೇಶ ಹೊರಡಿಸಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ 2 ಆದೇಶವನ್ನು ಹೊರಡಿಸಿದೆ. ಸರ್ಕಾರಿ ನೌಕರರ ವೇತನ ಶೇಕಡಾ 17ರಷ್ಟು ಹೆಚ್ಚಳ ಮತ್ತು ರಾಷ್ಟ್ರೀಯ ಪಿಂಚಣಿ ಯೋಜನೆ​ ಬಗ್ಗೆ ಪರಿಶೀಲನೆ ಸಂಬಂಧ ಆದೇಶ ಹೊರಡಿಸಿದೆ. ಎನ್​ಪಿಎಸ್​ ನಿವೃತ್ತ ನೌಕರರು ಸೇರಿದಂತೆ 15 ಲಕ್ಷ ಸರ್ಕಾರಿ ನೌಕರರಿಗೆ ಈ ಯೋಜನೆ ಅನ್ವಯವಾಗುತ್ತದೆ ಎಂದು ಷಡಕ್ಷರಿ ಅವರು ಹೇಳಿಕೆ ನೀಡಿದ್ದಾರೆ.