IND vs AUS: ಟೆಸ್ಟ್ ಸರಣಿಯಲ್ಲಿ ದಾಖಲೆ ಬರೆದ ಜಡೇಜಾ! ಕಪಿಲ್ ದೇವ್ ಬಳಿಕ ಈ ಸಾಧನೆ ಮಾಡಿದ್ದು ಇವರೇ!

Ravindra Jadeja record :ಸದ್ಯ ಕ್ರಿಕೆಟ್ ಪಂದ್ಯದ ಮೂಲಕ ಒಂದರ ನಂತರ ಒಂದರಂತೆ ಹಲವು ದಾಖಲೆಗಳನ್ನು ಮಾಡುತ್ತಿದ್ದು, ಇಂದೋರ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲೂ ದೊಡ್ಡ ದಾಖಲೆ ಮಾಡಿದವರು ಅವರೇ ಡ್ಯಾಶಿಂಗ್ ಆಲ್ ರೌಂಡರ್ ರವೀಂದ್ರ ಜಡೇಜಾ(Ravindra Jadeja record).

ಹೌದು ಆಸ್ಟ್ರೇಲಿಯಾ ವಿರುದ್ಧದ ಇಂದೋರ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ತಂಡಕ್ಕೆ ಮೊದಲ ಯಶಸ್ಸು ನೀಡಿದ್ದಾರೆ. ಟ್ರಾವಿಸ್ ಹೆಡ್ ಅವರನ್ನು ರವೀಂದ್ರ ಜಡೇಜಾ ಎಲ್ಬಿಡಬ್ಲ್ಯು ಮೂಲಕ ಔಟ್ ಮಾಡಿದರು. ಈ ವಿಕೆಟ್ ಪಡೆದ ನಂತರ, ಜಡೇಜಾ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ದಾಖಲಿಸಿದ್ದಾರೆ.

ಸದ್ಯ ಡ್ಯಾಶಿಂಗ್ ಆಲ್ ರೌಂಡರ್ ರವೀಂದ್ರ ಜಡೇಜಾ ಸದ್ಯ ಭರ್ಜರಿ ಫಾರ್ಮ್ ನಲ್ಲಿದ್ದಾರೆ.
ರವೀಂದ್ರ ಜಡೇಜಾ ಏಷ್ಯಾ ಕಪ್ 2022 ರಿಂದ ತಂಡದಿಂದ ಹೊರಗುಳಿಯುತ್ತಿದ್ದರು. ಆದರೆ ಇದೀಗ ಬಾರ್ಡರ್-ಗವಾಸ್ಕರ್ ಟ್ರೋಫಿ ಹಿನ್ನೆಲೆಯಲ್ಲಿ ತಂಡಕ್ಕೆ ಮರಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಇಂದೋರ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ತಂಡಕ್ಕೆ ಮೊದಲ ಯಶಸ್ಸು ನೀಡಿದ್ದು, ಟ್ರಾವಿಸ್ ಹೆಡ್ ಅವರ ವಿಕೆಟ್ ಪಡೆದ ಜಡೇಜಾ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳನ್ನು ಸಂಯೋಜಿಸುವ ಮೂಲಕ ತಮ್ಮ 500 ವಿಕೆಟ್‌ಗಳನ್ನು ಪೂರೈಸಿದರು.

ಮೊತ್ತ ಮೊದಲ ಭಾರತದ ಮಾಜಿ ನಾಯಕ ಮತ್ತು ಶ್ರೇಷ್ಠ ಆಲ್‌ರೌಂಡರ್ ಕಪಿಲ್ ದೇವ್ ಭಾರತದ ಅತ್ಯಂತ ಯಶಸ್ವಿ ಆಲ್‌ರೌಂಡರ್. ಅವರು ಭಾರತಕ್ಕಾಗಿ 131 ಟೆಸ್ಟ್ ಮತ್ತು 225 ಏಕದಿನ ಪಂದ್ಯಗಳನ್ನು ಆಡಿದ್ದು, ಟೆಸ್ಟ್‌ನಲ್ಲಿ ಕಪಿಲ್ ದೇವ್ 5248 ರನ್ ಮತ್ತು 434 ವಿಕೆಟ್‌ಗಳನ್ನು ಗಳಿಸಿದ್ದಾರೆ. ಇನ್ನೊಂದೆಡೆ ಏಕದಿನದಲ್ಲಿ ಅವರು 3783 ರನ್ ಮತ್ತು 253 ವಿಕೆಟ್‌ಗಳನ್ನು ಗಳಿಸಿದ್ದಾರೆ. ಅಲ್ಲದೆ ಅವರ ನಾಯಕತ್ವದಲ್ಲಿ ಭಾರತಕ್ಕೆ ಮೊದಲ ವಿಶ್ವಕಪ್ (world cup )ಗೆದ್ದುಕೊಟ್ಟವರು ಕಪಿಲ್ ದೇವ್(kapil dev) ಆಗಿದ್ದಾರೆ .

ಇನ್ನು ಮುಖ್ಯವಾಗಿ ರವೀಂದ್ರ ಜಡೇಜಾ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500 ವಿಕೆಟ್ ಹಾಗೂ 5000ಕ್ಕೂ ಹೆಚ್ಚು ರನ್ ಗಳಿಸಿದ್ದು, ಈಗ ಅವರು ಕಪಿಲ್ ದೇವ್ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5000 ರನ್ ಮತ್ತು 500 ವಿಕೆಟ್‌ಗಳನ್ನು ಗಳಿಸಿದ ಎರಡನೇ ಭಾರತೀಯ ಆಟಗಾರರಾಗಿ ಮಿಂಚಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಈ ಸರಣಿಯಲ್ಲಿ ರವೀಂದ್ರ ಜಡೇಜಾ ಅತ್ಯಂತ ಯಶಸ್ವಿ ಬೌಲರ್ ಆಗಿದ್ದಾರೆ.

ಮುಖ್ಯವಾಗಿ ಆಲ್‌ರೌಂಡರ್ ಕಪಿಲ್ ದೇವ್ ಮತ್ತು ರವೀಂದ್ರ ಜಡೇಜಾ ಈ ಇಬ್ಬರು ಆಟಗಾರರನ್ನು ಹೊರತುಪಡಿಸಿ ಯಾವುದೇ ಭಾರತೀಯ ಆಟಗಾರರು ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದಿಲ್ಲ.

Leave A Reply

Your email address will not be published.