Home Jobs Job : ನೀವು ಪಿಯುಸಿ ಮಾಡಿದ್ದೀರಾ? ಹಾಗಾದರೆ ನಿಮಗಿದೆ ಭರ್ಜರಿ ಉದ್ಯೋಗವಕಾಶ! ಅರ್ಜಿ ಆಹ್ವಾನ!

Job : ನೀವು ಪಿಯುಸಿ ಮಾಡಿದ್ದೀರಾ? ಹಾಗಾದರೆ ನಿಮಗಿದೆ ಭರ್ಜರಿ ಉದ್ಯೋಗವಕಾಶ! ಅರ್ಜಿ ಆಹ್ವಾನ!

Job

Hindu neighbor gifts plot of land

Hindu neighbour gifts land to Muslim journalist

Puc jobs : ಪಿಯುಸಿ (puc) , ಡಿಪ್ಲೋಮಾ ವಿದ್ಯಾಭ್ಯಾಸ ಮುಗಿಸಿ ಉದ್ಯೋಗ (Puc jobs) ಹುಡುಕುತ್ತಿರುವವರಿಗೆ ಸಂತೋಷದ ವಿಚಾರವಾಗಿದೆ. ಹೌದು ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಹುದ್ದೆಗೆ ಅರ್ಜಿ ಹಾಕಲು ಮಾಹಿತಿ ನೀಡಲಾಗಿದೆ.

ಪ್ರಸ್ತುತ ಈ ಹುದ್ದೆಗೆ ಪಿಯುಸಿ, ಡಿಪ್ಲೋಮಾ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಮಾರ್ಚ್ 25,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ 60 ಶೀಘ್ರ ಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜವಾನ ಮತ್ತು ಆದೇಶ ಜಾರಿಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಹುದ್ದೆಗೆ ತಕ್ಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ (job ) ಅಭ್ಯರ್ಥಿಗಳನ್ನು ಮೆರಿಟ್, ಪ್ರಾಯೋಗಿಕ ಪರೀಕ್ಷೆ, ಕಂಪ್ಯೂಟರ್ ಜ್ಞಾನ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಸದ್ಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 25,2023ರೊಳಗೆ ಅರ್ಜಿಯನ್ನು (application ) ಸಲ್ಲಿಸಬಹುದು. ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರು 200ರೂ ಅರ್ಜಿ ಶುಲ್ಕವನ್ನು ಆನ್‌ಲೈನ್, ಚಲನ್ ಮೂಲಕ ಪಾವತಿ ಮಾಡಬೇಕು. ಅರ್ಜಿ ಸಲ್ಲಿಸಿದ ನಂತರ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆ ನೀಡುತ್ತದೆ ಎಂದು ತಿಳಿಸಲಾಗಿದೆ.