SSLC Exam Guidelines : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೇ ಗಮನಿಸಿ, ಇಲ್ಲಿದೆ ನೋಡಿ ಪರೀಕ್ಷಾ ಗೈಡ್‌ಲೈನ್‌!!!

SSLC Exam Guidelines : ಕೇರಳ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC exam) ಮಾರ್ಚ್​ 9 ರಿಂದ ಆರಂಭವಾಗಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ಶಿಕ್ಷಣ (Education) ಇಲಾಖೆಯು ಕೆಲವೊಂದು ಮಾಹಿತಿಯನ್ನು ನೀಡಿದೆ ಎನ್ನಲಾಗಿದೆ. ಪರೀಕ್ಷಾ ಕೇಂದ್ರಕ್ಕೆ (Exam Hall) ಹೋಗುವ ಮೊದಲು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕಾದ ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದು, ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ (SSLC Exam Guidelines).

ಪರೀಕ್ಷಾ ಮಾರ್ಗಸೂಚಿಗಳು:
• ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ, ಕೇರಳ ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ 2023 ಮತ್ತು ಶಾಲೆಯ ಐಡಿ ಕಾರ್ಡ್ ಇಲ್ಲದೆ ಪರೀಕ್ಷಾ ಕೊಠಡಿಗೆ ಪ್ರವೇಶವಿಲ್ಲ.
• ಎಲ್ಲಾ ಪರೀಕ್ಷೆಗಳು ಬೆಳಿಗ್ಗೆ 9.30 ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 60 ನಿಮಿಷಗಳ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು.
• ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ (question paper) ನೀಡಿದ ನಂತರ ಪ್ರಶ್ನೆ ಪತ್ರಿಕೆಯನ್ನು ಓದಲು 15 ನಿಮಿಷಗಳ ಸಮಯಾವಕಾಶ ನೀಡಲಾಗುತ್ತದೆ.
• ಪರೀಕ್ಷಾ ಕೊಠಡಿಗೆ ಬೆಳಿಗ್ಗೆ 10.01 ಗಿಂತ ಮೊದಲು ತಲುಪುವವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.
• ಹಾಗೆಯೇ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್ (smartphone), ಕ್ಯಾಲ್ಕುಲೇಟರ್ (calculator) ಅಥವಾ ಬೇರೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.
• ಪರೀಕ್ಷೆಯ ಸಮಯದಲ್ಲಿ ಯಾವುದೇ ಅನ್ಯಾಯದ ವಿಧಾನದಲ್ಲಿ ವಿದ್ಯಾರ್ಥಿಯು ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.
• ಪರೀಕ್ಷೆಗಳು 9/3/2023 ರಿಂದ ಆರಂಭವಾಗಿದ್ದು, 29/3/2023 ರವರೆಗೆ ಇರಲಿದೆ.

ಪರೀಕ್ಷಾ ಮಂಡಳಿ ಫೆಬ್ರವರಿ 27 ರಿಂದ ಮಾರ್ಚ್ 3, 2023 ರವರೆಗೆ ಅಣಕು ಪರೀಕ್ಷೆಗಳನ್ನು ನಡೆಸುತ್ತದೆ. ಸದ್ಯ ಕೇರಳ ಪರೀಕ್ಷಾ ಭವನ (Kerala Pareeksha Bhavan ), ಕೇರಳ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ sslcexam.kerala.gov.in/ ನಲ್ಲಿ ಬಿಡುಗಡೆ ಮಾಡಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಲಿಂಕ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದಾಗಿದೆ.

Leave A Reply

Your email address will not be published.