V.A : ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಭರ್ತಿ, ಎಷ್ಟು? ಎಲ್ಲೆಲ್ಲಿ? ಇಲ್ಲಿದೆ ವಿವರ!

Share the Article

Village Accountant : ಈಗ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 2007 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧತೆ ನಡೆಸಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದೆ. ಕಂದಾಯ ಇಲಾಖೆ ವೆಬ್‌ಸೈಟ್‌ನಲ್ಲಿ ಸದ್ಯದಲ್ಲೇ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ಸರ್ಕಾರ ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ (Village Accountant) ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನಗಳ ಕುರಿತು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ. ನೇಮಕಾತಿ ಪ್ರಕ್ರಿಯೆ ಮುಖ್ಯವಾಗಿ ದ್ವಿತೀಯ ಪಿಯುಸಿ (Second Puc) ಅಂಕಗಳ ಆಧಾರದ ಮೇಲೆ ನಡೆಯುತ್ತದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಗ್ರಾಮ ಲೆಕ್ಕಿಗ( Village Accountant Posts)ಹುದ್ದೆಗಳಿವೆ ಎಂಬುದನ್ನು ಗಮನಿಸಿದರೆ, ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್( Online)ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಬೆಂಗಳೂರು ನಗರ 48, ಬೆಂಗಳೂರು ಗ್ರಾಮಾಂತರ 51, ಮೈಸೂರು 105, ಮಂಡ್ಯ 116, ಚಾಮರಾಜನಗರ 102, ಹಾಸನ 85, ಕೊಡಗು 37, ಚಿಕ್ಕಮಗಳೂರು 32, ದಕ್ಷಿಣ ಕನ್ನಡ 89, ಉಡುಪಿಯಲ್ಲಿ 38, ಬೆಳಗಾವಿ 135, ವಿಜಯಪುರ 22, ಬಾಗಲಕೋಟೆ 60,ಉತ್ತರ ಕನ್ನಡ 94, ಬೀದರ್ 57, ರಾಯಚೂರು 31, ಕಲಬುರಗಿ 134, ಕೊಪ್ಪಳ 31, ಯಾದಗಿರಿ 32, ಬಳ್ಳಾರಿ 33 ಮತ್ತು ವಿಜಯನಗರ ಜಿಲ್ಲೆಯಲ್ಲಿ 24, ಧಾರವಾಡ 31, ಗದಗ 44, ಹಾವೇರಿ 57, ತುಮಕೂರು 129, ರಾಮನಗರ 80, ಚಿಕ್ಕಬಳ್ಳಾಪುರ 63, ಚಿತ್ರದುರ್ಗ 93, ಕೋಲಾರ 66, ದಾವಣಗೆರೆ 17, ಶಿವಮೊಗ್ಗ 49, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ವಯೋಮಿತಿ(Age Limit)

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳಾಗಿದ್ದು, ಗರಿಷ್ಠ ವಯೋಮಿತಿ 35 ವರ್ಷಗಳು. ವಯೋಮಿತಿ ಸಡಿಲಿಕೆ, ಮೀಸಲಾತಿ ಮುಂತಾದ ವಿವರಗಳನ್ನು ನೇಮಕಾತಿ ಅಧಿಸೂಚನೆ ಪ್ರಕಟವಾದ ನಂತರ ಹೊರ ಬೀಳಲಿದೆ.

ಅರ್ಹತೆ

ಗ್ರಾಮ ಲೆಕ್ಕಿಗರ ಹುದ್ದೆಯನ್ನು ದ್ವಿತೀಯ ಪಿಯುಸಿ ಪರೀಕ್ಷೆ(Second Puc) ಅಥವಾ CBSE ಅಥವಾ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಜೊತೆಗೆ ಆಯಾಯ ವರ್ಗದ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.

ಅರ್ಜಿ ಶುಲ್ಕ

ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ (University) ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕಾಗಿದೆ. ಉಳಿದ ವರ್ಗದ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ 21,400-42,000 ರೂ. ವೇತನ ನಿಗದಿ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆ ಪ್ರಕಟವಾದ ಬಳಿಕ https://kandaya.karnataka.gov.in/ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಆಯ್ಕೆ ಪ್ರಕ್ರಿಯೆ (Selection Procedures)

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಲಿಖಿತ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ ನಡೆಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿ ಮಾಡಬೇಕಾಗಿದ್ದು, ಅರ್ಜಿ ಶುಲ್ಕ ಪಾವತಿ ಮಾಡದ ಅರ್ಜಿಗಳು ತಿರಸ್ಕೃತಗೊಳ್ಳುತ್ತದೆ ಎಂಬುದನ್ನು ಗಮನಿಸಬೇಕು.

Leave A Reply