ʼದೆಹಲಿಯಿಂದ ದೋಹಾಗೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿʻನೈಜೀರಿಯಾ ಪ್ರಜೆ ಸಾವುʼ

Share the Article

IndiGo Flight :ದೆಹಲಿಯಿಂದ ದೋಹಾಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ (IndiGo Flight) ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿತ್ತು, ಇದೀಗ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಸಾವನ್ನಪ್ಪಿರುವುದಾಗಿ ಮಾಹಿತಿ ಲಭ್ಯವಾಗಿದೆ ಎಂದು ವಿಮಾನಯಾನ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.

ಅನಾರೋಗ್ಯಕ್ಕೆ ಒಳಗಾದ ಪ್ರಯಾಣಿಕರೊಬ್ಬರು ವಿಮಾನ ಲ್ಯಾಂಡಿಂಗ್‌ ವೇಳೆ ಮೃತಪಟ್ಟಿದ್ದಾರೆ ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ. 60 ವರ್ಷದ ಮೃತ ಪ್ರಯಾಣಿಕ ನೈಜೀರಿಯಾ ಪ್ರಜೆ ಅಬ್ದುಲ್ಲಾ ಎಂದು ಮೂಲಗಳು ಮಾಹಿತಿ ನೀಡಿದೆ.

ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ದೆಹಲಿಯಿಂದ ದೋಹಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಕರಾಚಿಗೆ ತಿರುಗಿಸಲಾಯಿತು. ಶೀಘ್ರದಲ್ಲೇ ಕರಾಚಿಯಿಂದ ವಿಮಾನ ಟೇಕ್ ಆಫ್ ಆಗುವ ನಿರೀಕ್ಷೆಯಿದೆ.

Leave A Reply