ಕೃಷಿ ಇಲಾಖೆಯಲ್ಲಿ ಉದ್ಯೋಗ ಪಡೆಯಲಿಚ್ಚಿಸುವವರಿಗೆ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾ.20

KSDA recruitment : ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶವಿದ್ದು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (KSDA recruitment)  ಎರಡು ವರ್ಷಗಳ ಅವಧಿಗೆ ಆರ್‌ಕೆವಿವೈ ಕೋಶದಲ್ಲಿ ಕಾರ್ಯ ನಿರ್ವಹಣೆ ಮಾಡಲು ಕೃಷಿ ಇಲಾಖೆ, ತಾಂತ್ರಿಕ ಸಲಹೆಗಾರ ಮೂರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಕೃಷಿ ಇಲಾಖೆ
ಹುದ್ದೆ : ತಾಂತ್ರಿಕ ಸಲಹೆಗಾರ
ಒಟ್ಟು ಹುದ್ದೆ : ಮೂರು ಹುದ್ದೆ
ಉದ್ಯೋಗ ಸ್ಥಳ : ಬೆಂಗಳೂರು

ವಿದ್ಯಾರ್ಹತೆ :
ಅಭ್ಯರ್ಥಿಗಳು ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಲ್ಲಿ ಐಸಿಎಆರ್‌ ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕ್ಷೇತ್ರ ಮಟ್ಟದಲ್ಲಿ ಕನಿಷ್ಠ 5 ವರ್ಷಗಳ ಕಾಲದ ಅನುಭವ ಹೊಂದಿರಬೇಕು. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಸೇವಾನುಭವ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ :
ಕರ್ನಾಟಕ ಕೃಷಿ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿ ಮಾಡಲಾಗಿದೆ, ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಸಹ ಇರಲಿದೆ.

ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳು ಏಪ್ರಿಲ್ 2023 ರಿಂದ ಮಾರ್ಚ್ 2025ರ ಅಂತ್ಯದ ತನಕ ಎರಡು ವರ್ಷಗಳ ಅವಧಿಗೆ ಆರ್‌ಕೆವಿವೈ ಕೋಶದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಅನುಭವವಿರುವ ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಪ್ರಮುಖ ದಿನಾಂಕ :
20/3/2023ರ ಸಂಜೆ 5.30ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಸಲ್ಲಿಕೆ ವಿಳಾಸ :
Director of Agriculture, Commissionerate of Agriculture, Seshadri Road, Bengaluru-01.

ಅಧಿಕೃತ ವೆಬ್‌ಸೈಟ್‌ : https://raitamitra.karnataka.gov.in

ಹೆಚ್ಚಿನ ಮಾಹಿತಿಗೆ :
080-22074161

Leave A Reply

Your email address will not be published.