Dharmasthala Darshan Timings: ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಸಮಯದಲ್ಲಿ ಆಗಿದೆ ಬದಲಾವಣೆ! ಇಲ್ಲಿದೆ ಕಂಪ್ಲೀಟ್‌ ವಿವರ

Share the Article

Dharmasthala Darshan: ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಧಾನ ಧರ್ಮದಿಂದ ಪ್ರಖ್ಯಾತ ಪಡೆದಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವರ ದರ್ಶನದ ಬಗ್ಗೆ ಮಹತ್ವ ಮಾಹಿತಿ ತಿಳಿಸಲಾಗಿದೆ. ಸದ್ಯ ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ (Dharmasthala Darshan) ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸವಾಗಲಿದ್ದು, ಈ ಕುರಿತು ಧರ್ಮಸ್ಥಳ ದೇವಸ್ಥಾನದ (Temple ) ವತಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಭಕ್ತಾದಿಗಳು ಬದಲಾದ ದರ್ಶನ ಸಮಯವನ್ನು ತಿಳಿದುಕೊಂಡು ದೇವಸ್ಥಾನಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 16ರಂದು ರಾತ್ರಿ 8 ಗಂಟೆಯಿಂದ ಹೊರಾಂಗಣದಲ್ಲಿ ಮಾತ್ರ ದೇವರ ದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಅದಲ್ಲದೆ ಧರ್ಮಸ್ಥಳ ದೇಗುಲದಲ್ಲಿ ಮಾರ್ಚ್ 18ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಮುಖ್ಯವಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಧರ್ಮಸ್ಥಳ ದೇವಸ್ಥಾನದ ವತಿಯಿಂದ ಮಾಹಿತಿ ನೀಡಲಾಗಿದೆ.

ಧರ್ಮಸ್ಥಳ ಮಂಜುನಾಥ ದೇವರ ದರ್ಶನಕ್ಕಾಗಿ ಭೇಟಿ ನೀಡುವ ಭಕ್ತರು ಈ ಮೇಲಿನ ಸೂಚನೆಯನ್ನು ಪಾಲಿಸುವಂತೆ ದೇವಸ್ಥಾನದ ವತಿಯಿಂದ ಮಾಹಿತಿ ನೀಡಲಾಗಿದೆ.

Leave A Reply