B.Sriramulu : ಸಾರಿಗೆ ನೌಕರರ ವೇತನ ಹೆಚ್ಚಳ – ಬಿ ಶ್ರೀರಾಮುಲು ನೀಡಿದ್ರು ಗುಡ್‌ನ್ಯೂಸ್‌

B.Sriramulu: ಸಾರಿಗೆ ನೌಕರರು ವೇತನ ಹೆಚ್ಚಳದ ಮುಷ್ಕರಕ್ಕೆ ಅಣಿಯಾಗಿದ್ದು, ಈ ನಡುವೆ ಸಾರಿಗೆ ಸಚಿವರಾದ (Minister of Transport of Karnataka) ಬಿ.ಶ್ರೀರಾಮುಲು(B.Sriramulu) ಅವರು ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು( Karnataka State Road Transport Corporation Workers) ವೇತನ ಹೆಚ್ಚಳ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್​ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕರೆ ನೀಡಿದ್ದಾರೆ. ಈ ಮುಷ್ಕರಕ್ಕೆ 4 ನಿಗಮಗಳ ನೌಕರರು ಸಾಥ್ ನೀಡಿ ಬೆಂಬಲ ಸೂಚಿಸಲಿದ್ದು, ಸಾರಿಗೆ ನೌಕರರ ಸಂಘ ಅಂದಿನಿಂದ ​23,000 ಕೆಎಸ್​ಆರ್​ಟಿಸಿ ಬಸ್​ಗಳು ರಸ್ತೆಗೆ ಇಳಿಯದಿರುವ ಬಗ್ಗೆ ಮಾಹಿತಿ ನೀಡಿದೆ.

ಇದೀಗ, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿದ್ದ ಸಾರಿಗೆ ಸಚಿವರಾದ ಬಿ.ಶ್ರೀರಾಮುಲು ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವ ಕುರಿತು ಮಾಹಿತಿ ನೀಡಿದ್ದಾರೆ. ಈಗಾಗಲೇ ಸಾರಿಗೆ ನೌಕರರ ಜೊತೆಗೆ ಒಂದು ಸುತ್ತಿನ ಮಾತುಕತೆ ಆಗಿದ್ದು, ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವ ಕುರಿತಂತೆ ಪಕ್ಷದಲ್ಲಿ ಮಾತುಕತೆ ನಡೆಯುತ್ತಿದೆ. ಮುಖ್ಯಮಂತ್ರಿಯವರ ಜೊತೆಗೆ ಈ ಬಗ್ಗೆ ಸಮಾಲೋಚನೆ ನಡೆಸಿದ ಬಳಿಕ ಅಂತಿಮ ನಿರ್ಣಯ ಪ್ರಕಟಿಸುತ್ತೇವೆ. ಈ ನಡುವೆ ಸಾರಿಗೆ ನೌಕರರು ಮುಷ್ಕರ ಮಾಡುವುದಿಲ್ಲ ಎಂಬ ವಿಶ್ವಾಸವನ್ನು ಶ್ರೀರಾಮುಲು ಅವರು ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.