Home latest KSRTC ನೌಕರರ ಮುಷ್ಕರ ವಾಪಸ್‌ – ಇಲ್ಲ ಮುಷ್ಕರ ನಡೆಯುತ್ತದೆ – ಅನಂತ ಸುಬ್ಬರಾವ್ ಮತ್ತು...

KSRTC ನೌಕರರ ಮುಷ್ಕರ ವಾಪಸ್‌ – ಇಲ್ಲ ಮುಷ್ಕರ ನಡೆಯುತ್ತದೆ – ಅನಂತ ಸುಬ್ಬರಾವ್ ಮತ್ತು ಚಂದ್ರಶೇಖರ್ ಮಧ್ಯೆ ದ್ವಂದ್ವದ ಹೇಳಿಕೆ !

KSRTC

Hindu neighbor gifts plot of land

Hindu neighbour gifts land to Muslim journalist

KSRTC : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ತಮ್ಮವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್‌ 21 ರಂದು ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು (Bus Strike) ವಾಪಸ್‌ ಪಡೆದಿದೆ.

ಈ ಸಂಬಂಧ ಕೆಎಸ್‌ಆರ್‌ಟಿಸಿ (KSRTC) ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರೊಂದಿಗೆ ನಿನ್ನೆ ಶನಿವಾರ ರಾತ್ರಿ ರಾತ್ರಿ ಮಾತುಕತೆ ನಡೆದಿತ್ತು. ಇದೀಗ ಸಂಧಾನ ಸಭೆ ಯಶಸ್ವಿಯಾಗಿದ್ದು, ಭರವಸೆ ಸಿಕ್ಕಿದ ಮೇರೆಗೆ ಮುಷ್ಕರ ವಾಪಸ್‌ ಪಡೆಯಲಾಗಿದೆ. ಹಂತ ಹಂತವಾಗಿ ಭರವಸೆಗಳನ್ನು ಈಡೇರಿಸುವ ಆಶ್ವಾಸನೆ ಸಿಕ್ಕ ನಂತರ ಮುಷ್ಕರ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬರಲಾಗಿದೆ. ನೌಕರರ ಸಂಬಳ ಹೆಚ್ಚಳ ಹಾಗೂ ಭತ್ಯೆ ಸೇರಿದಂತೆ ಉಳಿದ ಎಲ್ಲ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆ ಜೊತೆಗೆ ನಿಗಮ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುವುದೆಂದು ಎಂ.ಡಿ ಅನ್ಬುಕುಮಾರ್ ಅವರು ಭರವಸೆ ನೀಡಿದ್ದಾರೆ. ಕೆಎಸ್ಆರ್ಟಿಸಿ ನಿಗಮ ತಮ್ಮ ಬೇಡಿಕೆಗಳಿಗೆ ಪೂರಕವಾಗಿ ಸ್ಪಂದಿಸಿದ ಕಾರಣ ಬರುವ ಮಂಗಳವಾರ ಕರೆಯಲಾಗಿದ್ದ ಮುಷ್ಕರವನ್ನು ಕೈಬಿಡಲಾಗಿದೆ ಎಂದು ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಚ್‌.ವಿ.ಅನಂತಸುಬ್ಬರಾವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರ ನ್ಯಾಯ ಸಮ್ಮತವಾಗಿ ವೇತನ ಪರಿಷ್ಕರಿಸಿಲ್ಲ ಎಂದು ಆರೋಪಿಸಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಯುಗಾದಿ ಹಬ್ಬದಲ್ಲಿ ಪ್ರಯಾಣಿಕರಿಗೆ ತೊಂದರೆ ನೀಡುವ ಉದ್ದೇಶ ಇರಲಿಲ್ಲ. ಸ್ಪಷ್ಟ ಭರವಸೆ ಸಿಗದ ಕಾರಣಕ್ಕೆ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕಳೆದ ಮೂರು ವರ್ಷಗಳಿಂದ ವೇತನ ಹೆಚ್ಚಳ ವಿಷಯವು ನೆನೆಗುದಿಗೆ ಬಿದ್ದಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಮುಂದೆ ನಿಂತು ಸಮಸ್ಯೆ ಬಗೆಹರಿಸಿದ್ದಾರೆ. ಈಗ ಇರುವ ಬಾಕಿ ಸಂಬಳ ನೀಡುವ ವಿಚಾರದಲ್ಲಿ ಕೂಡಾ ಸಂಘಟನೆಗಳ ಮಾಹಿತಿ ಪಡೆಯುವ ಭರವಸೆ ಸಿಕ್ಕಿದೆ ಎಂದು ಅವರು ತಿಳಿಸಿದ್ದಾರೆ.

ಎಚ್‌.ವಿ.ಅನಂತಸುಬ್ಬರಾವ್ ಅವರು ಮುಷ್ಕರ ಹಿಂಪಡೆಯಲಾಗಿದೆ ಎಂದರೂ, ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ಮಾರ್ಚ್‌ 24 ರಂದು ಕರೆ ನೀಡಿದ್ದ ಮುಷ್ಕರವನ್ನು ವಾಪಸ್‌ ಪಡೆದಿಲ್ಲ. ಕೆಎಸ್​​ಆರ್​ಟಿಸಿ ನೌಕಕರ ಸಂಘ ಜಂಟಿ ಕ್ರಿಯಾ ಸಮಿತಿ ವಾಪಸ್​ ಪಡೆದುಕೊಂಡಿದೆ. ಆದರೆ ಸಮಾನ ಮನಸ್ಕರ ವೇದಿಕೆ ಸಾರಿಗೆ ಬಂದ್​ಗೆ ಕರೆ ನೀಡಿದೆ. ಇದು ವಿರೋಧಾಭಾಸಕ್ಕೆಕಾರಣ ಆಗಿದೆ. ನಾಳಿದ್ದು ಅಂದರೆ ಮಾರ್ಚ್​​ 24 ರಂದು ಕರೆ ನೀಡಿರುವ ಬಂದ್​ ನಡೆಸಲಾಗುತ್ತದೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ. ಸರ್ಕಾರ ಹೊರಡಿಸಿದ ಆದೇಶ ಕೇವಲ‌ ಮೂಲ ವೇತನಕ್ಕೆ ಶೇಕಡಾ 15 ಹೆಚ್ಚಳ ಮಾಡುವ ವಿಚಾರಕ್ಕೆ ಸಂಬಂಧಿಸಿದೆ. ಇವತ್ತು ಜಂಟಿ ಕ್ರಿಯಾಸಮಿತಿಯವರು ಎಂಡಿ ಜೊತೆ ಮೀಟಿಂಗ್ ನಡೆಸಿದ್ದಾರೆ. ಅವರು ಯಾವ ಎಲ್ಲಾ ಒಪ್ಪಂದ ಮಾಡಿಕೊಂಡು ಮುಷ್ಕರ ವಾಪಾಸ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಏಕಾಏಕಿ ಮುಷ್ಕರ ವಾಪಾಸ್ ಪಡೆದಿದ್ದಾರೆ. ಇದರ ಉದ್ದೇಶ 24ರಂದು ನಡೆಯುವ ಸಾರಿಗೆ ಮುಷ್ಕರವನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಆದರೆ ನಮ್ಮ ಬೇಡಿಕೆಗಳು ಈಡೇರಿಲ್ಲ. ಮಾರ್ಚ್ 24 ರಂದು ಸಾರಿಗೆ ಮುಷ್ಕರ ಮಾಡುತ್ತೇವೆ ಎಂದು ಹೇಳಿದ್ದಾರೆ ಈ ಕುರಿತಂತೆ ಮಾಹಿತಿ ನೀಡಿರುವ ಚಂದ್ರಶೇಖರ್.

ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ ಕೆಲವೇ ಗಂಟೆಗಳಲ್ಲಿ 7ನೇ ವೇತನ ಜಾರಿ ಭರವಸೆ ಜತೆಗೆ ಮಧ್ಯಂತರ ಪರಿಹಾರವಾಗಿ ಶೇ 17ರಷ್ಟು ವೇತನ ಹೆಚ್ಚಿಸಲಾಗಿದೆ. ನಿಗಮಗಳಲ್ಲಿ ಒಂದಾದ ಕೆಪಿಟಿಸಿಎಲ್‌ ನೌಕರರ ಪ್ರತಿಭಟನೆಗೆ ಮಣಿದು ಒಟ್ಟು ವೇತನಕ್ಕೆ ಶೇ 20 ವೇತನ ಹೆಚ್ಚಳ ಮಾಡಲಾಗಿದೆ. ಆದರೆ ಸಾರಿಗೆ ನೌಕರರಿಗೆ ಲಿಖಿತ ಭರವಸೆ ನೀಡಿದ್ದರೂ ಮೂಲವೇತನಕ್ಕೆ ಶೇ 15ರಷ್ಟು ವೇತನ ಹೆಚ್ಚಿಸಿ, ಬಾಕಿ ಎಲ್ಲ ಆರ್ಥಿಕ ಸೌಲಭ್ಯ ಕಡಿತಗೊಳಿಸಿ ಆದೇಶಿಸಲಾಗಿದೆ. ಹಾಗಾಗಿ ನಾವು ಮುಷ್ಕರ ನಡೆಸುತ್ತೇವೆ ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್ ಅವರು ತಿಳಿಸಿದ್ದಾರೆ.