IAF Recruitment 2023 : ಭಾರತೀಯ ವಾಯುಪಡೆಯಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ : ಮಾ.31

IAF Recruitment 2023 :ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯಲ್ಲಿ ಉದ್ಯೋಗವಕಾಶವಿದ್ದು (IAF Recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಭಾರತೀಯ ವಾಯುಪಡೆ
ಹುದ್ದೆ : ಅಗ್ನಿವೀರ್ ವಾಯು
ವೇತನ ಮಾಸಿಕ : ₹ 30,000- 40,000
ಉದ್ಯೋಗದ ಸ್ಥಳ :ಭಾರತ

ವಿದ್ಯಾರ್ಹತೆ:
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಆಟೋಮೊಬೈಲ್/ಕಂಪ್ಯೂಟರ್ ಸೈನ್ಸ್/ಐಟಿ/ಇನ್‌ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 21 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು 250 ರೂ. ಪರೀಕ್ಷಾ ಶುಲ್ಕವನ್ನು ಕಟ್ಟಬೇಕು. ಆನ್​ಲೈನ್​ ಮೂಲಕ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ:
ಫಿಜಿಸಿಯನ್ ಫಿಟ್​ನೆಸ್ ಟೆಸ್ಟ್​
ಅಡಾಪ್ಟಬಿಲಿಟಿ ಟೆಸ್ಟ್​
ಮೆಡಿಕಲ್ ಪರೀಕ್ಷೆ
ಆನ್​ಲೈನ್ ಟೆಸ್ಟ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 31, 2023
ಆನ್​ಲೈನ್ ಟೆಸ್ಟ್​ ನಡೆಯುವ ದಿನ: ಮೇ 20, 2023

ಹೆಚ್ಚಿನ ವಿವರಗಳಿಗೆ : 020-25503105/25503106.

Leave A Reply

Your email address will not be published.