Employees DA Hike : ಕೊನೆಗೂ ದೊರಕಿತು ಸರಕಾರಿ ನೌಕರರಿಗೆ ಗುಡ್ ನ್ಯೂಸ್! ತುಟ್ಟಿಭತ್ಯೆ ಹೆಚ್ಚಳ!!!

Central Govt Employees : ಕೇಂದ್ರ ಸರ್ಕಾರವು (Central Govt Employees)ತನ್ನ ಉದ್ಯೋಗಿಗಳಿಗೆ ಶುಭ ಸುದ್ದಿ ನೀಡಿ ತುಟ್ಟಿಭತ್ಯೆಯನ್ನು ಹೆಚ್ಚಿಸಿದ್ದು, ಹೀಗಾಗಿ, ಒಂದು ಕೋಟಿಗೂ ಅಧಿಕ ಸರ್ಕಾರಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಪ್ರಯೋಜನ ದೊರೆಯಲಿದೆ.

7ನೇ ವೇತನ ಆಯೋಗದಡಿಯಲ್ಲಿ(7th Pay Commission) ಕೇಂದ್ರ ಸರ್ಕಾರದ ನೌಕರರ ತುಟ್ಟಿಭತ್ಯೆ(DA)ಯು ಜನವರಿ 1ರಿಂದ 2023 ಅನ್ವಯವಾಗುವಂತೆ ಮಾರ್ಚ್ ನಲ್ಲಿ ಹೆಚ್ಚಳವಾಗಲಿದೆ ಎಂದು ಈ ಹಿಂದೆ ವರದಿಯಾಗಿತ್ತು. ಇದಲ್ಲದೆ ಕೇಂದ್ರ ಸರ್ಕಾರವು ಪಿಂಚಣಿದಾರರ ತುಟ್ಟಿಭತ್ಯೆ (DR) ಅನ್ನು ಕೂಡಾ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿತ್ತು. ಸದ್ಯ, ಕೇಂದ್ರ ಸರ್ಕಾರವು ನೌಕರರು ಹಾಗೂ ಪಿಂಚಣಿದಾರರಿಗೆ ಭರ್ಜರಿ ಕೊಡುಗೆ ನೀಡಿದೆ.

ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದ ಹಿನ್ನೆಲೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಪ್ರಸಕ್ತ ತಿಂಗಳ ಆರಂಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ನೌಕರರ ವೇತನವನ್ನು ಶೇ. 17ರಷ್ಟು ಹೆಚ್ಚಳ ಮಾಡಿ ಅಧಿಕೃತವಾಗಿ ಆದೇಶ ನೀಡಿತ್ತು. ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರ ಕಳೆದ ಹಲವು ವರ್ಷಗಳ ಬೇಡಿಕೆಯನ್ನು ಶುಕ್ರವಾರ ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದ್ದು, ಈ ಕುರಿತು ಕೇಂದ್ರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Singh Thakur) ಘೋಷಣೆ ಮಾಡಿದ್ದಾರೆ.

ಬೆಲೆ ಏರಿಕೆಯನ್ನು ಸಮತೋಲನ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ (Central Government) ತನ್ನ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ಡಿಎ ನೀಡುತ್ತದೆ. ಕೈಗಾರಿಕಾ ಕಾರ್ಮಿಕರ ಅಥವಾ ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧಾರದಲ್ಲಿ ಲೆಕ್ಕ ಮಾಡಿ ಡಿಎ ಶೇ.4 ರಷ್ಟು ಹೆಚ್ಚಳ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ತನ್ನ ಸರ್ಕಾರಿ ಉದ್ಯೋಗಿಗಳ(Central Govt Employees) ತುಟ್ಟಿಭತ್ಯೆಯನ್ನು (DA) ಶೇ.4 ರಷ್ಡು ಹೆಚ್ಚಳ ಮಾಡಿದ್ದು, ಹೀಗಾಗಿ, ನೌಕರರ ತುಟ್ಟಿಭತ್ಯೆ ಶೇ.42ಕ್ಕೆ ಏರಿಕೆ ಮಾಡಿದಂತಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ಹೆಚ್ಚಳದ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಹೀಗಾಗಿ, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 4 ರಷ್ಟು ಏರಿಕೆ ಮಾಡಲಾಗಿದೆ. ಇದರಿಂದ ಒಟ್ಟಾರೆ ತುಟ್ಟಿಭತ್ಯೆ ಶೇ.42ಕ್ಕೆ ಏರಿಕೆಯಾಗಿರುವ ಕುರಿತು ಅನುರಾಗ್ ಠಾಕೂರ್ ಅವರು ಮಾಹಿತಿ ನೀಡಿದ್ದಾರೆ. 2023ರ ಜನವರಿ 1 ರಿಂದಲೇ ಈ ತುಟ್ಟಿಭತ್ಯೆ ಹೆಚ್ಚಳ ಅನ್ವಯವಾಗಲಿದ್ದು, ಕೇಂದ್ರದ 47.58 ಲಕ್ಷ ಉದ್ಯೋಗಿಗಳು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಇದರಿಂದ ಪ್ರಯೋಜನವಾಗಲಿದೆ. ಕೇಂದ್ರ ಸರ್ಕಾರಿ ನೌಕರರ ವೇತನವು(Central Government Employees) ತಿಂಗಳ ವೇತನ 20,000 ರೂಪಾಯಿ ಆಗಿದಲ್ಲಿ,ತುಟ್ಟಿಭತ್ಯೆ ಶೇ.4 ಹೆಚ್ಚಳದಿಂದ ಪ್ರತಿ ತಿಂಗಳ ಸಂಬಳದಲ್ಲಿ 800 ರೂಪಾಯಿ ಹೆಚ್ಚಳವಾಗುವ ಕುರಿತು ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ: SSPCA : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ನಿಮಗೆ ಸಿಗುತ್ತೆ ₹10 ಲಕ್ಷ!!

Leave A Reply

Your email address will not be published.