Rahul Gandhi: ಲೋಕಸಭೆ ಸದಸ್ಯತ್ವದಿಂದ ಅನರ್ಹವಾದ ಬಳಿಕ ರಾಹುಲ್‌ ಗಾಂಧಿಗೆ ಎಲ್ಲಿಂದೆಲ್ಲಾ ಕೊಕ್ ಗೊತ್ತ? ಅವರ ಮುಂದಿನ ನಡೆ ಏನು?

Rahul Gandhi : 2019ರ ಲೋಕಸಭೆ ಚುನಾವಣೆ(Parliment Election) ವೇಳೆ ಕೋಲಾರದಲ್ಲಿ ಮಾಡಿದ ಭಾಷಣ ಸಂಬಂಧ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ರಾಹುಲ್‌ ಗಾಂಧಿ(Rahul Gandhi) ಅವರ ಸದಸ್ವತ್ಯ ರದ್ದು ಮಾಡಿ ಲೋಕಸಭೆ ಸಚಿವಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಹೀಗಾಗಿ ಇನ್ನು ಮುಂದೆ ರಾಹುಲ್ ಸಂಸದರಲ್ಲ. ಈ ಎಲ್ಲಾ ಬೆಳವಣಿಗೆಗಳಿಂದಾಗಿ ರಾಹುಲ್ ಯಾವುದರಿಂದೆಲ್ಲಾ ವಂಚಿತರಾಗ್ತಾರೆ ಗೊತ್ತಾ?

ರಾಹುಲ್ ಗಾಂಧಿಯ ಲೋಕಸಭೆಯಿಂದ ಅನರ್ಹಗೊಳಿಸುವಿಕೆಯು ಹಲವಾರು ಸಂಭವನೀಯ ಪರಿಣಾಮಗಳನ್ನು ಹೊಂದಲಿದೆ. ಸದ್ಯ ರಾಹುಲ್‌ ಗಾಂಧಿ ಪ್ರತಿನಿಧಿಸುತ್ತಿರುವ ವಯನಾಡ್‌(Vayanad) ಲೋಕಸಭಾ ಕ್ಷೇತ್ರ ತೆರವಾಗಿದೆ. ಇನ್ನು ಆರು ತಿಂಗಳಲ್ಲಿ ಚುನಾವಣೆ ನಡೆಸುವ ಜವಾಬ್ದಾರಿ ಚುನಾವಣಾ ಆಯೋಗದ್ದು(Election Commission). ಜತೆಗೆ 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವುದರಿಂದ ಹಿಡಿದು ಲುಟ್ಯೆನ್ಸ್‌ನ ದೆಹಲಿಯ ತನ್ನ ಅಧಿಕೃತ ಬಂಗಲೆಯನ್ನು ಕಳೆದುಕೊಳ್ಳ ಬೇಕಾಗಬಹುದು.

ಹೌದು, ಲೋಕಸಭೆಯಿಂದ ಅವರನ್ನು ಅನರ್ಹಗೊಳಿಸುವುದರೊಂದಿಗೆ, ಉನ್ನತ ನ್ಯಾಯಾಲಯದಿಂದ ಪರಿಹಾರವನ್ನು ಪಡೆಯದಿದ್ದರೆ ರಾಹುಲ್ ಗಾಂಧಿ ಅವರು ಒಂದು ತಿಂಗಳೊಳಗೆ ಲುಟ್ಯೆನ್ಸ್ ದೆಹಲಿಯಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವೇಳೆ ಸೂರತ್‌ ನ್ಯಾಯಾಲಯ ನೀಡಿದ ತೀರ್ಪನ್ನು ಪ‍್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅವಕಾಶ ರಾಹುಲ್‌ ಗಾಂಧಿ ಅವರಿಗಿದೆ. ಶಿಕ್ಷೆಗೆ ಹಾಗೂ ಅನರ್ಹತೆಗೆ ತಡೆ ನೀಡುವ ಅಧಿಕಾರ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗೆ ಇದೆ. ಒಂದು ವೇಳೆ ಉನ್ನತ ನ್ಯಾಯಾಲಯದಲ್ಲೂ ಇದೇ ತೀರ್ಪು ಬಂದರೆ, ರಾಹುಲ್ ಗಾಂಧಿ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು. ಅಲ್ಲದೇ, ಶಿಕ್ಷೆ ಪೂರ್ಣಗೊಳಿಸಿದ ಬಳಿಕ 6 ವರ್ಷ ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.

ಅಂದಹಾಗೆ “ಸೂರತ್‌ನ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರಿಗೆ ಶಿಕ್ಷೆ ವಿಧಿಸಿದ ಪರಿಣಾಮವಾಗಿ ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ ದಿನಾಂಕದಿಂದ ಅಂದರೆ ಮಾರ್ಚ್ 23, 2023 ರಿಂದ ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ” ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

Leave A Reply

Your email address will not be published.