Praveen Nettaru : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ; ಸುಳ್ಯ ಪಿಎಫ್ಐ ಕಚೇರಿ ಎನ್ ಐಎ ಅಧಿಕಾರಿಗಳಿಂದ ಜಪ್ತಿ!!!

Praveen Nettaru : ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಸಂಚು ರೂಪಿಸಿದ್ದ ಪಿಎಫ್ ಐ ಸುಳ್ಯ ಕಚೇರಿಯನ್ನು ರಾಷ್ಟ್ರೀಯ ತನಿಖಾ ಸಂಪೂರ್ಣ ಜಪ್ತಿ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿದ್ದ ಕಚೇರಿಯನ್ನು ಜಪ್ತಿ ಮಾಡಲಾಗಿದ್ದು, ಈ ಬಗ್ಗೆ ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಆರ್ಡರ್ ಕಾಪಿ ರವಾನೆ ಮಾಡಲಾಗಿದೆ. ಸುಳ್ಯ ಪಿಎಫ್ ಐ ಕಚೇರಿ ಇದ್ದ ಜಾಗವನ್ನು ಪರಾಬಾರೆ ಮಾಡುವಂತಿಲ್ಲ. ಬಾಡಿಗೆ, ಲೀಜ್ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ಪ್ರಾಪರ್ಟಿ ಸಾಗಿಸುವುದು ಅಥವಾ ನವೀಕರಣ ಮಾಡುವುದು ನಿಷೇಧ ಹೇರಲಾಗಿದೆ ಎಂದು ಆದೇಶ ಪತ್ರದಲ್ಲಿ ಬರೆಯಲಾಗಿದೆ.

ಅಷ್ಟೇ ಅಲ್ಲದೇ ಅಮಾಯಕ ಬಿಜೆಪಿ ಕಾರ್ಯಕರ್ತ, ಸದಾ ಜನರ ಒಳಿತಿಗಾಗಿ ಓಡಾಡುತ್ತಿದ್ದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲು ಸುಳ್ಯ ದ ಪಿಎಫ್‌ಐ ಕಚೇರಿಯಲ್ಲೇ ಸಂಚು ರೂಪಿಸುತ್ತಿದ್ದ ಹಾಗೂ ಭಯೋತ್ಪಾದನ ಚಟುವಟಿಕೆಗಳಿಗೂ ಬಳಕೆ ಮಾಡಲಾಗುತ್ತಿತ್ತು ಎಂದು ತಿಳಿಯಲಾಗಿದೆ.

ಪ್ರವೀಣ್ ನೆಟ್ಟಾರು (Praveen Nettaru ) ಹತ್ಯೆ ಪ್ರಕರಣ
ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದು, ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದರು. ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದರು. ಘಟನೆ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.