IPL 2023 : RCB ಪಂದ್ಯಾವಳಿ ಸಿಲಿಕಾನ್ ಸಿಟಿ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಿಎಂಟಿಸಿ, ನಮ್ಮ ಮೆಟ್ರೋ.
IPL 2023 match : IPL 2023 ಕ್ರಿಕೆಟ್ ಇದೇ ಮಾರ್ಚ್ 31 ಶುರುವಾಗಿದ್ದು, ಬೆಂಗಳೂರಿನ ಹಾಟ್ ಫೇವರೇಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯಾವಳಿ ಇಂದು ಸಂಜೆ 7:30ಕ್ಕೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು ಸಾವಿರಾರು ಕ್ರಿಕೆಟ್ ಅಭಿಮಾನಿಗಳು ಸೇರಲಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಬೆಂಗಳೂರು ಸಿಟಿ ಟ್ರಾಫಿಕ್ ಪೊಲೀಸ್ ವಾಹನ ನಿಲುಗಡೆ ನಿಷೇಧಿಸಿದ್ದು ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಬಿಎಂಟಿಸಿ( ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್ಪೋರ್ಟ್ ಕಾರ್ಪೊರೇಷನ್) ತನ್ನ ಬಸ್ ಸೇವೆಯನ್ನು ಮಧ್ಯರಾತ್ರಿವರೆಗೂ ವಿಸ್ತರಿಸಿದೆ
ಹಾಗೂ ನಮ್ಮ ಮೆಟ್ರೋ ಸಹ ಮಧ್ಯರಾತ್ರಿವರೆಗೂ ತನ್ನ ಕಾರ್ಯಾಚರಣೆ ವಿಸ್ತರಿಸಲಿದೆ.
ಲೀಗ್ ಹಂತದ 5 ಪಂದ್ಯಾವಳಿಗಳು ಏಪ್ರಿಲ್ 10, 17, 26 ಮತ್ತು ಮೇ 21 ರಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾತ್ರಿ 11 ಗಂಟೆಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಚ್ಚುವರಿ ಬಸ್ ಸೌಲಭ್ಯವನ್ನು ನಗರದ ವಿವಿಧ ಬಾಗಗಳಿಗೆ ಒದಗಿಸಲಾಗುತ್ತದೆ. ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಕೆಂಗೇರಿ ಕೆಎಚ್ಬಿ ಕ್ವಾರ್ಟರ್ಸ್, ನೆಲಮಂಗಲ, ಯಲಹಂಕ 5ನೇ ಹಂತ, ಆರ್.ಕೆ.ಹೆಗಡೆ ನಗರ, ಬಾಗಲೂರು, ಹೊಸಕೋಟೆ ಕಡೆಗೆ ಚಿನ್ನಸ್ವಾಮಿ ಮೈದಾನದಿಂದ ಬಸ್‌ಗಳು ಇರಲಿವೆ ಎಂದು ಬಿಎಂಟಿಸಿ ತಿಳಿಸಿದೆ.
ಬಿಎಂಟಿಸಿ ಬಸ್‌ಗಳು ಎಚ್ಎಎಲ್ ರಸ್ತೆ, ಹೂಡಿ, ಅಗರ ದೊಮ್ಮಸಂದ್ರ, ಹೊಸೂರು ರಸ್ತೆ, ಜಯದೇವ ಆಸ್ಪತ್ರೆ, ನಾಯಂಡನಹಳ್ಳಿ, ಮಾಗಡಿ ರಸ್ತೆ, ಯಶವಂತಪುರ, ಹೆಬ್ಬಾಳ, ನಾಗವಾರ, ಟ್ಯಾನರಿ ರಸ್ತೆ, ಹೆಣ್ಣೂರು ರಸ್ತೆ, ಟಿನ್ ಫ್ಯಾಕ್ಟರಿ ಮಾರ್ಗವಾಗಿ ಸಂಚರಿಸಲಿವೆ ಎಂದು ಬಿಎಂಟಿಸಿ ಸಂಸ್ಥೆ ಮಾಹಿತಿ ನೀಡಿದೆ.
ನಮ್ಮ ಮೆಟ್ರೋ ಸೇವೆಯಲ್ಲೂ ವಿಸ್ತರಣೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳು ನಿಗದಿಯಾಗಿರುವ ದಿನಗಳಲ್ಲಿ ನಮ್ಮ ಮೆಟ್ರೋ ಸಮಯವನ್ನು ವಿಸ್ತರಿಸಲಾಗುವುದು ಎಂದು ಬಿಎಂಆರ್‌ಸಿಎಲ್ ಈಗಾಗಲೇ ತಿಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ (IPL 2023 match) ಪಂದ್ಯಗಳು ನಡೆಯುವ ದಿನಗಳಲ್ಲಿ ಮೆಟ್ರೋ ರೈಲುಗಳಲ್ಲಿ ಹೆಚ್ಚಿನ ಸಂಖ್ಯೆಯ ಜನ ಓಡಾಡುವುದರಿಂದ ಬೆಂಗಳೂರು ಮೆಟ್ರೋ ರೈಲು ನಿಗಮವು ಈ ವ್ಯವಸ್ಥೆ ಮಾಡಿದೆ.
ಬೈಯಪ್ಪನಹಳ್ಳಿ – ಕೆಂಗೇರಿ ಮತ್ತು ನಾಗಸಂದ್ರ – ಸಿಲ್ಕ್ ಇನ್ಸ್ಟಿಟ್ಯೂಟ್ ಮೆಟ್ರೋ ರೈಲು ಸೇವೆಗಳನ್ನು ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗುವುದು. ಹಾಗೂ ಇದೇ ವೇಳೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕೊನೆಯ ರೈಲು ಮಧ್ಯರಾತ್ರಿ 1.30ಕ್ಕೆ ಹೊರಡಲಿದೆ. ನಗರದಲ್ಲಿ ಪಾರ್ಕಿಂಗ್ ಸಮಸ್ಯೆಗಳು ಹಾಗೂ ಟ್ರಾಫಿಕ್ ಸಮಸ್ಯೆಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ . ಅದಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮೆಟ್ರೋ ಮೂಲಕ ಪ್ರಯಾಣಿಸುವವರಿಗೆ ಅವಧೀ ವಿಸ್ತರಣೆಯು ನೆರವಾಗಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಇಂದು ನಡೆಯಲಿದೆ. ಐಪಿಎಲ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ಬಾರಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಬೆಂಗಳೂರು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಚಾರ ವಿಭಾಗವು ನಗರದ ಕೆಲವು ಪ್ರದೇಶಗಳಲ್ಲಿ ವಾಹನ ನಿಲುಗಡೆಯನ್ನು ನಿರ್ಬಂಧಿಸಿದೆ.
ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಅಂಬೇಡ್ಕರ್ ವೀಡಿ ರಸ್ತೆ, ಟ್ರಿನಿಟಿ ಜಂಕ್ಷನ್ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಟ್ಲ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆಗೆ ಅವಕಾಶ ನಿರ್ಬಂಧಿಸಲಾಗಿದೆ.
ಇದನ್ನೂ ಓದಿ: Tanisha Kuppanda Nude: ಕನ್ನಡದ ನಾಯಕಿ ನಟಿಗೆ ನೀಲಿ ಚಿತ್ರದಲ್ಲಿ ನಟಿಸ್ತೀರಾ ಎಂದು ಕೇಳಿದ ಯೂಟ್ಯೂಬರ್, ಆಕೆಯ ಉತ್ತರ..?!