Kerala: ಕೇರಳ ರೈಲಿನಲ್ಲಿ ಬೆಂಕಿ ಹಚ್ಚಿದ ಕಿರಾತಕ! ಮಹಾರಾಷ್ಟ್ರದ ರತ್ನಗಿರಿಯಲ್ಲಿ ಪತ್ತೆ!!!

Kerala train fire incident : ಕೇರಳ ರೈಲಿನಲ್ಲಿ ಸಹ ಪ್ರಯಾಣಿಕರ ಮೇಲೆ ಬೆಂಕಿ ಹಚ್ಚಿ (Kerala train fire incident) ಮೂವರ ಸಾವಿಗೆ ಕಾರಣವಾದ ಕಿರಾತಕನ ಜಾಡು ಹಿಡಿದು ಹೊರಟ ಕೇರಳ ಪೊಲೀಸರು ಇಂದು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಭಯೋತ್ಪಾದನೆ ನಿಗ್ರಹದಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ .

ಕೇರಳದಿಂದ 1000km ಉತ್ತರಕ್ಕೆ ಅಂದರೆ ಮಹಾರಾಷ್ಟ್ರ ಜಿಲ್ಲೆಯ ರತ್ನಗಿರಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಬಂಧಿಸಿದ್ದಾರೆ.
ಆರೋಪಿಯ ಹೆಸರು ಶಾರುಕ್ ಎಂದು ಗುರುತಿಸಲಾಗಿದ್ದು ಈ ಕೂಡಲೇ ಆರೋಪಿಯನ್ನು ಕೇರಳ ಪೊಲೀಸರಿಗೆ ಒಪ್ಪಿಸಲಾಗುವುದು ಎಂದು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹದಳದ ಅಧಿಕಾರಿ ತಿಳಿಸಿದ್ದಾರೆ.

ದಾಳಿ ಹಿಂದಿನ ಉದ್ದೇಶ ಇನ್ನು ಸ್ಪಷ್ಟವಾಗಿ ತಿಳಿದಿಲ್ಲ ಆದರೆ ಕೋಝಿಕ್ಕೋಡ್ ಜಿಲ್ಲೆಯ ಎಲತ್ತೂರ್ ಬಳಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದ ಜಗಳದಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವುದಾಗಿ ಶಂಕಿತನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಭಾರತದಲ್ಲಿ ಭಯೋತ್ಪಾದನೆ ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಕಣ್ಣೂರು ನಿಲ್ದಾಣದಲ್ಲಿ ರೈಲು ಕೋಚ್‌ಗಳನ್ನು ಪರಿಶೀಲಿಸಿದೆ ಮತ್ತು ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಘಟನೆಯ ವೇಳೆ ಅಲ್ಲಿದ್ದ ಕೆಲವು ಪ್ರಯಾಣಿಕರು ಮತ್ತು ರೈಲ್ವೆ ಸಿಬ್ಬಂದಿಯನ್ನೂ ಎನ್‌ಐಎ ವಿಚಾರಣೆಗೊಳಪಡಿಸಿದೆ.

ಪ್ರಕರಣದ ತನಿಖೆಗಾಗಿ ಕೇರಳ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು, ಶಂಕಿತನನ್ನು ಬಂಧಿಸಲು ಯಾವುದೇ ಮಾಹಿತಿ ನೀಡಿದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ನಿರ್ಣಾಯಕ ಸಾಕ್ಷಿ ರಜಾಕ್ ನೀಡಿದ ವಿವರಣೆಯ ಆಧಾರದ ಮೇಲೆ ಪೊಲೀಸರು ಶಂಕಿತನ ರೇಖಾಚಿತ್ರವನ್ನೂ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: House Warming: ದಿವಂಗತ ಪ್ರವೀಣ್ ನೆಟ್ಟಾರು ಹೊಸ ಮನೆಯ ಗೃಹ ಪ್ರವೇಶ ಏಪ್ರಿಲ್ 27 ರಂದು ನಿಗದಿ!

Leave A Reply

Your email address will not be published.