Actor Chethan Ahimsa : ʼ”ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ” – ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ನಟ ಚೇತನ್..!

Share the Article

Actor Chethan Ahimsa : ಪದೇ ಪದೇ ವಿವಾದ ಸುಳಿಯಲ್ಲೇ ಸುತ್ತುತ್ತಿರೋ ಆ ದಿನಗಳು ಖ್ಯಾತಿಯ ನಟ ಚೇತನ್‌(Actor Chethan Ahimsa )ಇದೀಗ ಮತ್ತೆ ಹೊಸ ವಿವಾದಾತ್ಮಕ ಪೋಸ್ಟ್‌ ಹಾಕುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲೇ ಗಾಂಜಾ ಕೇಸ್‌ ಸುದ್ದಿಗಳು ಪದೇ ಪದೇ ಮುನ್ನೆಲೆಗೆ ಬರುತ್ತಲೇ ಇದೆ. ಆದರೆ ಇದೀಗ ನಟ ಚೇತನ್‌ ಕೂಡ ಗಾಂಜಾ ವಿಚಾರವನ್ನೇ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಸದ್ದಿಲ್ಲದೇ ಗಾಂಜಾಗೆ ಪ್ರೋತ್ಸಾಹ ನೀಡುವಂತೆ ಪೋಸ್ಟ್‌ ಮಾಡಿದ್ದಾರೆ. ಹಲವರ ಕೆಂಗಣ್ಣಿಗೆ ಸಿಲುಕಿದ್ದಾರೆ ಇದರಿಂದ ಎಂದು ಹೇಳಬಹುದು.

ಡ್ರಗ್ಸ್ ವಿಚಾರವಾಗಿ ಸ್ಯಾಂಡಲ್ ವುಡ್ ಸುದ್ದಿಯಲ್ಲಿದ್ದಾಗ ಗಾಂಜಾ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಸದ್ದಿಲ್ಲದೇ ಇದೀಗ ಮತ್ತೆ ಚೇತನ್ ಆ ಕುರಿತು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಅದರಲ್ಲೂ ಹಿಮಾಚಲ ಮುಖ್ಯಮಂತ್ರಿ ಸುಖು ಗಾಂಜಾ ವಿಚಾರವಾಗಿ ಮಾತನಾಡಿದ್ದನ್ನು ಅನುಮೋದಿಸುವ ಮೂಲಕ “ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ ಎಂದು ನಟ ಚೇತನ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಇದೀಗ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಫೇಸ್ ಬುಕ್ ನಲ್ಲಿ ಬರೆದುಕೊಂಡ ಚೇತನ್, ಹಿಮಾಚಲದ ಮುಖ್ಯಮಂತ್ರಿಯ ನಡೆಯು ಒಳ್ಳೆಯದು ಕರ್ನಾಟಕವೂ ಇದರತ್ತ ಗಮನ ಹರಿಸುವ ಮೂಲಕ ಗಾಂಜಾ ಕೃಷಿಯು ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸುತ್ತದೆ ಮತ್ತು ರೋಗಿಗಳಿಗೆ ಔಷಧೀಯ ಪ್ರಯೋಜನಗಳನ್ನು ಹೇಗೆ ಒದಗಿಸುತ್ತದೆ ಎಂಬುದನ್ನು 5 ಸದಸ್ಯ ಸಮಿತಿಯೊಂದು ಅಧ್ಯಯನ ಮಾಡುತ್ತದೆ.

Leave A Reply