ಜಗದೀಶ್ ಶೆಟ್ಟರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ

Share the Article

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್‌ ಸೂಚಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಾಗೂ ಅವರು ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದಾರೆ. (Jagadish Shettar resigned)

ಅವರು ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ನಂತರ ಈ ನಿರ್ಧಾರ ಪ್ರಕಟಿಸಿದ್ದಾರೆ.

” ನಾನು ನಾಳೆ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಬಳಿಕ ನನ್ನ ಮುಂದಿನ ನಿಲುವು ಏನೆಂದು ಹೇಳುತ್ತೇನೆ” ಎಂದು ಅವರು ಬೇಸರದಿಂದ ತಮ್ಮ ನಿರ್ಧಾರ ತಿಳಿಸಿದ್ದಾರೆ.

ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಇಂದು ರಾತ್ರಿ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದ್ದರು. ಅದರ ನಂತರ ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರ ಬಂದಿದೆ.

224 ಕ್ಷೇತ್ರಗಳ ಪೈಕಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಸೇರಿದಂತೆ ಇನ್ನೂ ಒಟ್ಟು 12 ಕ್ಷೇತ್ರಗಳಿಗೆ ಬಿಜೆಪಿ ಇನ್ನಷ್ಟೇ ತನ್ನ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.

Leave A Reply