Jagadish Shetter: ಬಿಜೆಪಿಗೆ ಟಕ್ಕರ್ ಕೊಟ್ಟ ಶೆಟ್ಟರ್! ರಾಹುಲ್ ಸಮ್ಮುಖದಲ್ಲೇ ಕಾಂಗ್ರೆಸ್ ಸೇರ್ಪಡೆ? ದೆಹಲಿಗೆ ಹಾರಲು 2 ಹೆಲಿಕಾಪ್ಟರ್ ರೆಡಿ!

Jagadish Shetter join congress : ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಏನೆಲ್ಲಾ ಬೆಳವಣಿಗೆಗಳು ಆಗುತ್ತಿವೆ ಅನ್ನೋದು ಊಹೆಗೂ ನಿಲುಕುದಂತಾಗಿದೆ. ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ(BJP) ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌(Jagadish Shetter), ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂಬ ಚರ್ಚೆ ದಟ್ಟವಾಗಿದೆ. ಈ ಮಧ್ಯೆ ಶೆಟ್ಟರ್ ಸ್ವಾಗತಕ್ಕೆ ಕಾಂಗ್ರೆಸ್ ವೇದಿಕೆಯನ್ನು ಸಿದ್ಧಪಡಿಸಿಕೊಂಡಿದೆ ಎಂದೇ ಹೇಳಲಾಗುತ್ತಿದ್ದು, ಅವರನ್ನು ಬೆಂಗಳೂರಿಗೆ ಕರೆತರಲು ಹುಬ್ಬಳ್ಳಿಯಿಂದ ಎರಡು ಹೆಲಿಕಾಪ್ಟರ್‌ ವ್ಯವಸ್ಥೆಯನ್ನು ಕಾಂಗ್ರೆಸ್‌ ಮಾಡಿರುವುದು ಇದಕ್ಕೆ ಪುಷ್ಟಿ ನೀಡುತ್ತಿದೆ.‌

ಹೌದು, ಶಿರಸಿಗೆ ತೆರಳಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ (BJP) ಹಿರಿಯ ನಾಯಕ ಜಗದೀಶ್ ಶೆಟ್ಟರ್ (Jagadish Shettar) ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂದೇ ಬೆಂಗಳೂರಿಗೆ ತೆರಳಿ ರಾಹುಲ್ ಗಾಂಧಿ (Rahul Gandhi) ಸಮ್ಮುಖದಲ್ಲಿಯೇ ಕಾಂಗ್ರೆಸ್ (Congress) ಸೇರ್ಪಡೆಯಾಗುವ  (Jagadish Shetter join congress) ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ ಯು.ಬಿ.‌ ಶೆಟ್ಟಿ ಅವರ ಹೆಸರಿನಲ್ಲಿ ಹೆಲಿಕಾಪ್ಟರ್‌ ಅನ್ನು ಬುಕ್‌ ಮಾಡಲಾಗಿದೆ. ಶೆಟ್ಟರ್‌ ಮಧ್ಯಾಹ್ನದ ನಂತರ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ.

ಶೆಟ್ಟರ್ ಜತೆಗೆ ಕೆಲವು ಮಾಜಿ ಶಾಸಕರು, ನಿಗಮ‌ ಮಂಡಳಿಗಳ ಮಾಜಿ ಅಧ್ಯಕ್ಷರು ಸಹ ಬೆಂಗಳೂರಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ, ಭಾನುವಾರ (ಏ.16) ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮವೂ ಇದ್ದು, ಅವರ ಸಮ್ಮುಖದಲ್ಲಿಯೇ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸು ಗುಸು ಪ್ರಾರಂಭವಾಗಿದೆ.

ಅಂದಹಾಗೆ ಹುಬ್ಬಳ್ಳಿ, ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬಿಜೆಪಿಯಿಂದ ಟಿಕೆಟ್ ವಂಚಿತವಾದ ಬೆನ್ನಲ್ಲೇ ಅಸಮಾಧಾನಗೊಂಡಿದ್ದರು. ಈ ಬೆನ್ನಲ್ಲೇ ದೆಹಲಿಗೆ ಹೋಗಿ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಿದ್ದರು. ಶನಿವಾರ ರಾತ್ರಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಮತ್ತು ಸಿಎಂ ಬೊಮ್ಮಾಯಿ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಸಂಧಾನ ಮಾತುಕತೆ ವಿಫಲವಾದ ಬೆನ್ನಲ್ಲೇ ಭಾನುವಾರ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಇಂದೇ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಬಿಜೆಪಿಗೆ ಗುಡ್ ಬೈ ಹೇಳಿದ ಬಳಿಕ ಶೆಟ್ಟರ್, ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಗದೀಶ್ ಶೆಟ್ಟರ್ ಸ್ವಾಗತಕ್ಕೆ ಈಗಾಗಲೇ ಕಾಂಗ್ರೆಸ್ ವೇದಿಕೆ ಸಿದ್ಧಗೊಂಡಿದೆ. ಶಿರಸಿಯಿಂದ ವಾಪಸ್ ಆದ ಬಳಿಕ ಬೆಂಗಳೂರು ಕಡೆ ಮುಖಮಾಡಲಿದ್ದು, ಈ ವೇಳೆ ಶೆಟ್ಟರ್ ಜೊತೆ ಮಾಜಿ ಶಾಸಕರು, ಕೆಲ ನಿಗಮ ಮಂಡಳಿ ಅಧ್ಯಕ್ಷರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

Leave A Reply

Your email address will not be published.