KEA: KEA ಇಂದ ಐದು ಇಲಾಖೆ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ!

KEA: ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಐದು ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆ (job notification) ಬಿಡುಗಡೆ ಮಾಡಲಿದೆ. ಇಂದಿನಿಂದ ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹುದ್ದೆಯ (job) ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

 

ಯಾವೆಲ್ಲ ಇಲಾಖೆ ಸರ್ಕಾರಿ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆಯಾಗಲಿದೆ?
• ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು.
• ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್, ಬೆಂಗಳೂರು.
• ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು.
• ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು.
• ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು.

ಈ ಹುದ್ದೆಯ ಅಧಿಸೂಚನೆ ಬಿಡುಗಡೆಯಾದ ನಂತರ ಯಾವೆಲ್ಲಾ ಪೋಸ್ಟ್ ಖಾಲಿ ಇದೆ ಎಂಬುದನ್ನು ತಿಳಿಯಬಹುದು. ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ಹುದ್ದೆಗಳು ಸೇರಿದಂತೆ ಹುದ್ದೆಗಳಿರಲಿವೆ.

ಅಭ್ಯರ್ಥಿಗಳು ಕೇವಲ ಆನ್‌ಲೈನ್‌ (online) ಮೂಲಕ ಅರ್ಜಿ ಸಲ್ಲಿಸುವುದಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಬೆಂಗಳೂರು ಕೇಂದ್ರದಲ್ಲಿ ಮಾತ್ರ ಎಲ್ಲ ಹುದ್ದೆಗಳಿಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯನ್ನು 2023 ರ ಜೂನ್, ಜುಲೈನಲ್ಲಿ ನಡೆಸಲಾಗುವುದು ಎಂದು ಹೇಳಲಾಗಿದೆ.

ಅಧಿಸೂಚನೆ ಬಿಡುಗಡೆ ನಂತರ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.

Leave A Reply

Your email address will not be published.