Police Raid: ಬೆಂಗಳೂರಿನಲ್ಲಿ ಪೊಲೀಸರಿಂದ 500ಕ್ಕೂ ಹೆಚ್ಚು ರೌಡಿಗಳ ಮನೆಗಳ ಮೇಲೆ ಹಠಾತ್ ದಾಳಿ!

Share the Article

Police Raid : ರಾಜ್ಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬೆಂಗಳೂರು ನಗರದ 500 ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ (Police Raid)ಮಾಡಿದ್ದು, ಅವರ ಮನೆಯಲ್ಲಿದ್ದ ಮಾರಕಾಸ್ತ್ರಗಳನ್ನು ಹಾಗೂ ರೌಡಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ, ಯಾವುದೇ ರೌಡಿಗಳು ತಮ್ಮ ಪುಂಡಾಟಿಕೆ ತೋರಿಸದಂತೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ಕೇಂದ್ರ ವಿಭಾಗ, ದಕ್ಷಿಣ ವಿಭಾಗ , ಪಶ್ಚಿಮ ವಿಭಾಗ ಮತ್ತು ಉತ್ತರ ವಿಭಾಗದಲ್ಲಿ ರೌಡಿ ಗಳ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಮಾರಕಾಸ್ತ್ರಗಳು ಲಭ್ಯವಾಗದ ರೌಡಿಗಳಿಗೆ ಚುನಾವಣಾ ಸಮಯದಲ್ಲಿ ಯಾವ ಪಕ್ಷದ ಪರ ಹೋಗಿ ಗಲಾಟೆ ಮಾಡಬಾರದು. ಜೊತೆಗೆ, ರೌಡಿಸಂ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಹೆಚ್ಚಿನ ಪರಿಶೀಲನೆ ಮುಂದುವರೆಸಿದ್ದಾರೆ.

ಮುಖ್ಯವಾಗಿ ಇಂದು ಬೆಂಗಳೂರು ಪಶ್ಚಿಮ ವಿಭಾಗದ 1,500 ಕ್ಕೂ ಹೆಚ್ಚು ಪೊಲೀಸರು ರೌಡಿಶೀಟರ್ ಗಳ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಪೊಲೀಸರ ದಾಳಿ ವೇಳೆ, ಮಚ್ಚು ಲಾಂಗುಗಳು ಪತ್ತೆಯಾಗಿವೆ. ವಾರಂಟ್ ಪೆಂಡಿಂಗ್ ಇದ್ದ ಕೆಲ ರೌಡಿಗಳು ಮನೆಯಲ್ಲಿ ಪತ್ತೆಯಾಗಿದ್ದು, ಮಾರಕಾಸ್ತ್ರಗಳನ್ನು ಹಾಗೂ ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈಗಾಗಲೇ 12 ರೌಡಿಗಳನ್ನು ಗಡಿಪಾರು ಮಾಡಲಾಗಿದ್ದು, ಮತ್ತೆ 45 ಕ್ಕೂ ಹೆಚ್ಚು ರೌಡಿಗಳನ್ನು ಗಡಿಪಾರು ಮಾಡಲು ಸಿದ್ಧತೆ ನಡೆಸಿದ್ದಾರೆ.

ಜೊತೆಗೆ ಇನ್ನು ಹಲವು ದಿನಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡು ತಿರುಗಾಡುತ್ತಿದ್ದ ಕೆಲವು ಕಳ್ಳರನ್ನು ಕೂಡ ಪೊಲೀಸರು ಹೆಡೆಮುರಿಕಟ್ಟಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: Crime news : ಶಾಲೆಗೆ ಹೋಗುತ್ತಿದ್ದ ಬಾಲಕಿಯ ಅತ್ಯಾಚಾರಗೈದು ಕೊಲೆ! ಕ್ಯಾಬ್‌ ಡ್ರೈವರ್‌ನಿಂದ ಭೀಕರ ಕೃತ್ಯ!

Leave A Reply