Siddaramaiah : ಲಿಂಗಾಯತ ಸಿಎಂ ಅವ್ರೇ ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು! ನಾಲಗೆ ಹರಿಬಿಟ್ಟು ಸಿದ್ದರಾಮಯ್ಯ ಎಡವಟ್ಟು
Siddaramaiah on Lingayat CM :ಚುನಾವಣೆ ಪ್ರಚಾರದ ಭರದಲ್ಲಿ ರಾಜ್ಯ ರಾಜಕೀಯ ನಾಯಕರು ಉತ್ಸಾಹದಿಂದ ಮನ ಬಂದಂತೆ ಮಾತನಾಡುತ್ತಿದ್ದಾರೆ. ಕೆಲವೊಮ್ಮೆ ಇವು ವಿವಾದಕ್ಕೂ ಎಡೆಮಾಡಬಹುದು. ಅಂತೆಯೇ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಲಿಂಗಾಯತ ಸಿಎಂ ಇದ್ದಾರಲ್ಲಾ (Siddaramaiah on Lingayat CM), ಅವ್ರೇ, ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು ಎಂದು ಹೇಳುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ.
ಹೌದು, ವರುಣಾ (Varuna) ಕ್ಷೇತ್ರದಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿದ್ದರಾಮಯ್ಯ ಅವರು ಲಿಂಗಾಯತ ಸಿಎಂ(Lingayata CM) ಇದ್ದಾರಲ್ಲಾ, ಅವ್ರೇ, ಭ್ರಷ್ಟಾಚಾರ ಮಾಡಿ ರಾಜ್ಯ ಹಾಳು ಮಾಡಿರೋದು ಎಂದು ಹೇಳುವ ಮೂಲಕ ಸದ್ಯ ಲಿಂಗಾಯತ ಸಮುದಾಯದವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಅಂದಹಾಗೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಸುದ್ದಿವಾಹಿನಿಯೊಂದರ ಪತ್ರಕರ್ತರು ಸಂದರ್ಶನ ಮಾಡುತ್ತಿದ್ದಾಗ, ಬಿಜೆಪಿ(BJP) ನಾಯಕರು ಅಧಿಕಾರಕ್ಕೆ ಬಂದಲ್ಲಿ ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಈ ಲಿಂಗಾಯತ ಸಿಎಂ ಅಸ್ತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ, ಈಗಾಗಲೇ ಲಿಂಗಾಯತರೇ ಮುಖ್ಯಮಂತ್ರಿಯಾಗಿದ್ದಾರಲ್ಲಾ, ಅವರೇ ಎಲ್ಲಾ ಭ್ರಷ್ಟಾಚಾರ ಮಾಡಿ ಹಾಳುಮಾಡಿರುವುದು ರಾಜ್ಯವನ್ನ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ.
ಈ ಹೇಳಿಕೆ ಬೆನ್ನಲೇ ರಾಜ್ಯ ಬಿಜೆಪಿಯ ಸಾಮಾಜಿಕ ಜಾಲತಾಣ ಘಟಕ ಟ್ವೀಟ್ ಮಾಡಿದ್ದು, “ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ”. ಎಂದು ಹೇಳಿದೆ.
ಇನ್ನು ತಮ್ಮ ಹೇಳಿಕೆ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದು, ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಲಿಂಗಾಯತ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದಿದ್ದಾರೆ.
ಅಲ್ಲದೆ ಸಿಎಂ ಬೊಮ್ಮಾಯಿ(CM Bommai) ಗೆ ಸೀಮಿತವಾಗಿ ಮಾತ್ರ ನಾನು ಹೇಳಿಕೆ ನೀಡಿದ್ದೇನೆ. ಈ ಹಿಂದೆ ಸಿಎಂ ಆಗಿದ್ದ ಲಿಂಗಾಯತ ಸಮಾಜದವರು ಪ್ರಮಾಣಿಕರಾಗಿದ್ದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್, ಜೆ.ಹೆಚ್.ಪಟೇಲ್, S.R.ಕಂಠಿ ಸೇರಿ ಲಿಂಗಾಯತ ಸಮುದಾಯದ ಸಿಎಂಗಳು ಅತ್ಯಂತ ಹಾನೆಸ್ಟ್ ಆಗಿದ್ದರು. ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ. ಚುನಾವಣೆ ಹಿನ್ನೆಲೆ ನನ್ನ ಹೇಳಿಕೆ ತಿರುಚಿ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಲಿಂಗಾಯತರ ಮೇಲೆ ವಿಶ್ವಾಸ ಇಲ್ಲದಿದ್ದರೆ ಏಕೆ ಇಷ್ಟು ಸೀಟ್ ನೀಡುತ್ತಿದ್ದೆವು ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ @siddaramaiah, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ.
ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ.#LingayatVirodhiCongress pic.twitter.com/ScgSlymvKd
— BJP Karnataka (@BJP4Karnataka) April 22, 2023
ಬಳಿಕ ಮಾತನಾಡಿದ ಅವರು ನನ್ನನ್ನು ಬಿಜೆಪಿಯವರು ಏನು ಮಾಡೋಕೆ ಸಾಧ್ಯ ಇಲ್ಲ, ವರುಣಾದ ಜನರು ನನ್ನ ಕೈ ಬಿಡುವುದಿಲ್ಲ. ನಾನು ಎಲ್ಲೇ ಹೋದರೂ ಜನರು ನಿರೀಕ್ಷೆಗೂ ಮೀರಿ ಬೆಂಬಲ ಕೊಡುತ್ತಿದ್ದಾರೆ. ಈ ಬಾರಿ ವರುಣಾದಲ್ಲಿ ಗೆಲ್ಲುವುದರ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.